ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ

KannadaprabhaNewsNetwork |  
Published : Mar 21, 2024, 01:01 AM IST
ಕಾಪು20 | Kannada Prabha

ಸಾರಾಂಶ

ಮುದರಂಗಡಿ, ಮಜೂರು ಬಿಜೆಪಿ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಮಂಗಳವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪುಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಲ್ಲಿನ ಮುದರಂಗಡಿ ಮತ್ತು ಮಜೂರು ಬಿಜೆಪಿ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಮಂಗಳವಾರ ಶಾಸಕರಾದ ಸುರೇಶ ಶೆಟ್ಟಿ ನೇತೃತ್ವದಲ್ಲಿ ನಡೆದವುಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಜನಸಾಮಾನ್ಯರಿಗೆ ಸಿಗುವ ಸಾಮಾನ್ಯ ವ್ಯಕ್ತಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಆಯುಷ್ಮಾನ್ ಭಾರತ ಇಂತಹ ಜನಪರ ಯೋಜನೆಗಳನ್ನು ನೀಡಿದ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆದ್ದು ಪುನಃ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಕೋಟ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದರು.ಈ ಸಂದರ್ಭ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಲೋಕಸಭಾ ಚುನಾವಣೆಯ ಕಾಪು ಉಸ್ತುವಾರಿಗಳಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಮರುಳಿಧರ್ ಪೈ, ಮುದರಂಗಡಿ ಶಕ್ತಿ ಕೇಂದ್ರದ ಸಂಚಾಲಕ ಶಿವರಾಮ್ ಬಂಡಾರಿ, ಮಜೂರು ಶಕ್ತಿ ಕೇಂದ್ರದ ಸಂಚಾಲಕಿ ಶಶಿಪ್ರಭಾ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮುದರಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಮೋಹಿನಿ, ಕಾಪು ಪುರಸಭೆಯ ಸದಸ್ಯ ಅರುಣ್ ಶೆಟ್ಟಿ ಪಾದೂರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ