ಇಂದು ನಾಳೆ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

KannadaprabhaNewsNetwork |  
Published : Jan 18, 2024, 02:05 AM IST
17ಎಚ್ಎಸ್ಎನ್21 : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್‌.ದ್ಯಾವೇಗೌಡ. | Kannada Prabha

ಸಾರಾಂಶ

ಮುಂಬರುವ ಲೋಕಾಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೮ ಮತ್ತು ೧೯ ರಂದು ಹಾಸನ ಜಿಲ್ಲೆಯ ಬೇಲೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮುಂಬರುವ ಲೋಕಾಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೮ ಮತ್ತು ೧೯ ರಂದು ಹಾಸನ ಜಿಲ್ಲೆಯ ಬೇಲೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಪಕ್ಷದ ಪ್ರಮುಖ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜೆಡಿಎಸ್ ಸಭೆಯನ್ನು ಗುರುವಾರ ಮದ್ಯಾಹ್ನ ೩ ಕ್ಕೆ ಬೇಲೂರು ತಾಲೂಕಿನ ಶ್ರೀ ಚನ್ನಕೇಶವ ದೇವಾಲಯದ ಮುಂಬಾಗ ಸಭೆ ನಡೆಸಿ ನಂತರ ಸಂಜೆ ೬ ಗಂಟೆಗೆ ಹಾಸನ ನಗರದ ಸಂಸದರ ನಿವಾಸದಲ್ಲಿ ಜರುಗಲಿದೆ. ಶುಕ್ರವಾರ ೧೧ ಗಂಟೆಗೆ ಅರಸೀಕೆರೆಯಲ್ಲಿ ನಮ್ಮ ಪಕ್ಷದ ಮುಖಂಡರಾದ ಸಂತೋಷ್ ಮನೆ ಮುಂಭಾಗ ಎಲ್ಲಾ ನಮ್ಮ ಪಕ್ಷದ ಪದಾಧಿಕಾರಿಗಳು, ಪ್ರಮುಖ ಕಾರ್ಯಕರ್ತರು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಜಿಪಂ, ತಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಜಿ ಶಾಸಕರು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿಯ ಎಲ್ಲಾ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಭಾಗವಹಿಸುವಂತೆ ಮನವಿ ಮಾಡಿದರು.ಈ ಸಭೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಂದೆ ಬರಲಿರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲು ಹಾಗೂ ಪಕ್ಷವನ್ನು ಸಂಘಟಿಸಲು ಕುರಿತು ಸಭೆ ಆಯೋಜಿಸಲು ಸೂಚನೆ ಕೊಡಲಾಗಿದ್ದು, ಎರಡು ದಿನಗಳ ಕಾಲ ಜೆಡಿಎಸ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ, ಸಂಸದರಾದ ಪ್ರಜ್ವಲ್ ರೇವಣ್ಣ, ವಿ.ಪ ಸದಸ್ಯರಾದ ಸೂರಜ್ ರೇವಣ್ಣ, ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ, ಬೇಲೂರಿನ ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್, ಪಕ್ಷದ ಹಿರಿಯರಾದ ಕೆ.ಎಂ. ರಾಜೇಗೌಡ, ಹಾಸನ ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ಸೇರಿದಂತೆ ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರಾದ ಹೊಂಗೆರೆ ರಘು, ಜಿಪಂ ಮಾಜಿ ಸದಸ್ಯ ಶಿವನಂಜಪ್ಪ, ವಕೀಲರಾದ ಶೇಷಾದ್ರಿ, ಗ್ರಾಪಂ ಮಾಜಿ ಅಧ್ಯಕ್ಷ ಹನುಮೇಗೌಡ (ಪಾಪಣ್ಣ), ನಗರಸಬೆ ಮಾಜಿ ಅಧ್ಯಕ್ಷ ಸಯ್ಯದ್ ಅಕ್ಬರ್ ಇತರರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ