ದ.ಕ. ರೈಲ್ವೆ ಸಮಸ್ಯೆ ಕುರಿತು 17ರಂದು ಮಂಗ್ಳೂರಲ್ಲಿ ರೈಲ್ವೆ ಸಚಿವರ ಸಭೆ

KannadaprabhaNewsNetwork |  
Published : Jul 13, 2024, 01:31 AM IST
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ | Kannada Prabha

ಸಾರಾಂಶ

ಈ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆಗೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಮಂಗಳೂರುದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ ದ.ಕ. ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಜು.17ರಂದು ಮಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ವಿನಂತಿ ಮೇರೆಗೆ ರೈಲ್ವೆ ರಾಜ್ಯ ಸಚಿವರು ಸಭೆ ನಡೆಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ಸಂಸದ ಮಂಗಳೂರು ಸೆಂಟ್ರಲ್‌ ಮತ್ತು ಜಂಕ್ಷನ್‌ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆ. ಕೊಂಕಣ ರೈಲ್ವೆ ನಿಗಮ ಲಿಮಿಟೆಡ್ (ಕೆಆರ್‌ಸಿಎಲ್) ಸ್ವತಂತ್ರ ಸಂಸ್ಥೆಯಾಗಿ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು, ಇತರ ವಲಯಗಳಿಂದ ಮುಖ್ಯ ರೈಲ್ವೆ ಮೂಲಸೌಕರ್ಯಗಳ ಅವಲಂಬನೆಯನ್ನು ನಿವಾರಿಸಲು, ಈ ವಿಲೀನ ಅತೀ ಅವಶ್ಯವಾಗಿದೆ.ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಅಗತ್ಯವಿದ್ದು, ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಮತ್ತು ಪ್ರಯಾಣಿಕರ ಸಾಗಣೆ ಸುಗಮಗೊಳ್ಳುತ್ತದೆ. ಈ ನಡುವೆ, ಸುಬ್ರಹ್ಮಣ್ಯದಿಂದ ಸಕಲೇಶಪುರದ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯ ಸೈಡಿಂಗ್ ಒದಗಿಸಲು ಕ್ರಮಗಳನ್ನು ಕೈಗೊಳ್ಳುವುದು. ಉಳಿದಂತೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ ನಡೆಸಬೇಕಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರು, ರೈಲ್ವೆ ವಿಭಾಗಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆಗೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ