ಕನ್ನಡಪ್ರಭ ವಾರ್ತೆ ಮಂಡ್ಯ
ಈ ಸಭೆಗೆ ನಟ ದರ್ಶನ್ ಮತ್ತು ಅವರ ಅಭಿಮಾನಿಗಳು, ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ. ಸುಮಾರು ೫ ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಎಂದರು.
ನಗರದ ಗ್ರಾಮದೇವತೆ ಶ್ರೀ ಕಾಳಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದೆ ಸುಮಲತಾ ಅಂಬರೀಷ್ ಸಭೆಗೆ ಚಾಲನೆ ನೀಡಲಿದ್ದಾರೆ. ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು ಎಂದರು.ಬೆಂಗಳೂರಿಗೆ ಹೋಗಿದ್ದವರೆಲ್ಲರೂ ಸುಮಲತಾ ಸ್ಪರ್ಧೆಗೆ ಒತ್ತಡ ಹಾಕಿದ್ದಾರೆ. ಸ್ಪರ್ಧೆಯ ನಿರೀಕ್ಷೆಯಲ್ಲಿದ್ದೇವೆ. ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಮಳವಳ್ಳಿ ಚೌಡೇಗೌಡ, ಬೆಳಗೊಳ ಮಂಜು, ಕೋಣಸಾಲೆ ಜಯರಾಂ, ಕಲ್ಲಹಳ್ಳಿ ನಾಗೇಂದ್ರ, ಸುರೇಶ್ ಮೊದಲಾದವರು ಗೋಷ್ಠಿಯಲ್ಲಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಸೋಮವಾರ ಬಿರುಸನ್ನು ಪಡೆದುಕೊಂಡಿತ್ತು. ಕಾಂಗ್ರೆಸ್ ಅಭ್ಯರ್ಥಿ ಸೇರಿದಂತೆ ಏಳು ಅಭ್ಯರ್ಥಿಗಳು ಒಟ್ಟು ಒಂಬತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೂರನೇ ದಿನದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರಾಗಿ ಸ್ಪರ್ಧೆ ಬಯಸಿ 7 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.