ಅ.೧೫ರಂದು ಕೆವಿಎಸ್ ಒಂದು ನೆನಪು ವಿಚಾರ ಸಂಕಿರಣ

KannadaprabhaNewsNetwork | Published : Oct 11, 2024 11:49 PM

ಸಾರಾಂಶ

ಚಲುವರಾಯಸ್ವಾಮಿ ‘ಮತ್ತೆ ಮತ್ತೆ ಶಂಕರಗೌಡ’ ಪುಸ್ತಕ ಬಿಡುಗಡೆ ಮಾಡುವರು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ಪಿ. ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು.

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿಲ್ಲಾಡಳಿತ, ಕೆ.ವಿ.ಶಂಕರಗೌಡ ಅಧ್ಯಯನ ಪೀಠ, ಕರ್ನಾಟಕ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅ.೧೫ರ ಬೆಳಿಗ್ಗೆ ೧೦.೩೦ಕ್ಕೆ ‘ಕೆ.ವಿ.ಶಂಕರಗೌಡ ೧೦೯ ಒಂದು ನೆನಪು’ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿಯ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್‌ಗೌಡ ತಿಳಿಸಿದರು.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ. ಧರಣೀದೇವಿ ಮಾಲಗತ್ತಿ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾಹಿತಿ ಡಾ.ರಾಗೌ ಆಶಯ ನುಡಿಗಳನ್ನಾಡುವರು, ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ, ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಕಾರಿ ಡಾ. ಎಚ್.ಎಲ್.ನಾಗರಾಜು, ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜಿಲ್ಲಾ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಭಾಗವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕಿ ಎಚ್.ಆರ್.ಸುಜಾತ ಉಪಸ್ಥಿತರಿರಲಿದ್ದು, ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಮಧ್ಯಾಹ್ನ ೧೨ಕ್ಕೆ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಗೆ ಕೆ.ವಿ.ಶಂಕರಗೌಡರ ಕೊಡುಗೆ ಸಂಬಂಧ ಹಿರಿಯ ಸಾಹಿತಿ ಡಾ.ರಾಜಪ್ಪ ದಳವಾಯಿ ಉಪಸ್ಥಿತಿಯಲ್ಲಿ ವಿಚಾರ ಗೋಷ್ಠಿ, ಮಂಡ್ಯ ಜಿಲ್ಲೆಯ ಸಾಮಾಜಿಕ- ಆರ್ಥಿಕ ಮುನ್ನಡೆಗೆ ಕೆ.ವಿ.ಶಂಕರಗೌಡರ ಕೊಡುಗೆ ಸಂಬಂಧ ಡಾ. ಬಿ.ಆರ್.ರವಿಕಾಂತೇಗೌಡರ ಉಪಸ್ಥಿತಿಯಲ್ಲಿ ವಿಚಾರಗೋಷ್ಠಿ, ಸ್ವಾತಂತ್ರ್ಯಾ ನಂತರದ ಕರ್ನಾಟಕ ರಾಜಕೀಯದಲ್ಲಿ ಕೆ.ವಿ.ಶಂಕರಗೌಡರ ಸ್ಥಾನ ವಿಚಾರ ಕುರಿತು ಡಾ.ಎಸ್.ಬಿ.ಶಂಕರಗೌಡರ ಉಪಸ್ಥಿತಿಯಲ್ಲಿ ವಿಚಾರಗೋಷ್ಠಿಗಳು ನಡೆಯಲಿವೆ ಎಂದು ಹೇಳಿದರು.

ಸಂಜೆ ೪ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ‘ಮತ್ತೆ ಮತ್ತೆ ಶಂಕರಗೌಡ’ ಪುಸ್ತಕ ಬಿಡುಗಡೆ ಮಾಡುವರು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ಪಿ. ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಮಾಜಿ ಶಾಸಕರಾದ ಎಂ. ಶ್ರೀನಿವಾಸ್, ಬಿ. ರಾಮಕೃಷ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಭಾಗವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು, ನಿರ್ದೇಶಕ ನಾಗಪ್ಪ, ತಗ್ಗಹಳ್ಳಿ ವೆಂಕಟೇಶ್ ಹಾಜರಿದ್ದರು.

Share this article