ಹುಬ್ಬಳ್ಳಿ:
ಇಲ್ಲಿನ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್ಎಸ್‌ನ ಪ್ರಾದೇಶಿಕ ನಿರ್ದೇಶನಾಲಯ ಹಾಗೂ ಕಾನೂನು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಆಯೋಜಿಸಿದ್ದ 2024ನೇ ಸಾಲಿನ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಸಮಾಜಕ್ಕೆ ಕೊಡುಗೆ ನೀಡಬೇಕು. ಉತ್ತಮ ಶಿಕ್ಷಣದ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತರಬಹುದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಅವಿನಾಭಾವ ಸಂಬಂಧ ಹೊಂದಬೇಕಾಗಿದೆ ಎಂದ ಅವರು, ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ವಿದ್ಯಾರ್ಥಿಗಳನ್ನು ಒಗ್ಗೂಡಿಸುತ್ತಿದೆ. ಶಿಬಿರದಲ್ಲಿ ಬೇರೆ ಬೇರೆ ರಾಜ್ಯದ 150ಕ್ಕೂ ಅಧಿಕ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ ಎಂದರು.ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಮಾತನಾಡಿ, ಈ ವರ್ಷದಲ್ಲಿ 10 ಸಾವಿರ ಎನ್‌ಎಸ್‌ಎಸ್ ಸ್ವಯಂ ಸೇವಕರ ಗುರಿ ಮುಟ್ಟಲಾಗಿದೆ. ವಿವಿಧ ಸಂಸ್ಕೃತಿಗಳ ಸಂಗಮವನ್ನು ಭಾರತದಲ್ಲಿ ಕಾಣಬಹುದು. ಬೇರೆ ಬೇರೆ ಧರ್ಮಗಳು ಇಲ್ಲಿದ್ದರೂ ವಿವಿಧೆತೆಯಲ್ಲಿ ಏಕತೆ ಹೊಂದಲಾಗಿದೆ. ಆಹಾರ ಪದ್ಧತಿ, ವೇಷಭೂಷಣ, ಭಾಷೆಗಳು ಸಾಕಷ್ಟಿದ್ದರೂ ನಾವೆಲ್ಲರೂ ಒಂದಾಗಿದ್ದೇವೆ. ದೇಶದಲ್ಲಿ ಜಾತೀಯತೆ, ಕೋಮುಗಲಭೆ, ಭಾಷಾ ತಾರತಮ್ಯ ಸೇರಿದಂತೆ ವಿವಿಧ ಸಮಸ್ಯೆ ಏದುರಿಸಬೇಕಾಗಿದೆ. ಶಿಬಿರಾರ್ಥಿಗಳು ಎಲ್ಲವನ್ನೂ ಮರೆತು ಎನ್ಎಸ್ಎಸ್ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾನೂನು ವಿವಿ ಕುಲಪತಿ ಡಾ. ಸಿ. ಬಸವರಾಜು, ಉತ್ತಮ ಸಮಾಜ ನಿರ್ಮಾಣಕ್ಕೆ ಎನ್‌ಎಸ್ಎಸ್ ಅವಶ್ಯಕವಾಗಿದೆ. ಸರಿಯಾದ ಶಿಕ್ಷಣದ ಕೊರತೆಯಿಂದ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಾಗುತ್ತಿಲ್ಲ. ರಾಷ್ಟ್ರದ ಐಕ್ಯತೆಗೆ ಹೆಚ್ಚಿನ ಒತ್ತು ನೀಡಬೇಕು. ಆರೋಗ್ಯಕರ ಸಮಾಜ ಕಟ್ಟಲು ಮುಂದಾಗಬೇಕು. ಎಲ್ಲ ಸಮುದಾಯ ಒಟ್ಟುಗೂಡಿಸುವ ಕೆಲಸಗಳಾಗಬೇಕಿವೆ. ಮೊದಲು ನಾವು ನಮ್ಮ ಜವಾಬ್ದಾರಿ ಅರಿತು ಮುನ್ನೆಡಯಬೇಕು. ದೇಶದ ಸಂಸ್ಕೃತಿ ಉಳಿಸಿಕೊಂಡು ಹೋಗಬೇಕಿದೆ. ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.