ಬಳ್ಳಾರಿ: ನಗರದ 5ನೇ ವಾರ್ಡಿನ ಕಾಕರ್ಲತೋಟ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು.
ಸೇತುವೆ ಕಾಮಗಾರಿಯ ಹೊರತಾಗಿ 5ನೇ ವಾರ್ಡಿನ ರಸ್ತೆ ಅಭಿವೃದ್ಧಿಗಾಗಿ ₹75 ಲಕ್ಷ ಮಂಜೂರು ಮಾಡಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ 5ನೇ ವಾರ್ಡಿನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.ಕಾಮಗಾರಿಗೆ ಚಾಲನೆ:
3ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯ ಒಳಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ (₹4.19 ಕೋಟಿ ವೆಚ್ಚ, ಸಿಸಿ ರಸ್ತೆ) ಚಾಲನೆ ನೀಡಿದ ನಗರ ಶಾಸಕ ನಾರಾ ಭರತ್ ರೆಡ್ದಿ, ಎಪಿಎಂಸಿಯ ಪಕ್ಕದ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಹೊರ ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜನರಿಂದ ಅಹವಾಲು ಸ್ವೀಕರಿಸಿದರು.ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಈಗಾಗಲೇ ಒವರ್‌ಹೆಡ್ ಟ್ಯಾಂಕ್ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಹೊರ ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಬಳಿಕ ನಗರದ 8ನೇ ವಾರ್ಡಿನ ಹಂದ್ರಾಳ ಪ್ರದೇಶದಲ್ಲಿ ₹1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು. ತದನಂತರ ನೂತನ ನಿರ್ಮಾಣ ಹಂತದಲ್ಲಿ ಚಾಲ್ತಿಯಲ್ಲಿರುವ ಹಂದ್ರಾಳ ಸೇತುವೆ ಕಾಮಗಾರಿ ಪರಿಶೀಲಿಸಿದರು.ಮೇಯರ್ ಮುಲ್ಲಂಗಿ ನಂದೀಶ್, ಪಾಲಿಕೆಯ ಸದಸ್ಯರಾದ ರಾಜಶೇಖರ ಹಡ್ಲಿಗಿ, ಎಂ. ಪ್ರಭಂಜನಕುಮಾರ್, ರಾಮಾಂಜನೇಯ, ವಿಜಯ್, ಅನೂಪ್ ಇದ್ದರು.