ಹೊಸಕೋಟೆ: ರಾಜ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಮತ್ತೊಂದು ಅಧ್ಯಾಯ ಶುರುವಾಗಲಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಪ್ರಗತಿ ಹೊಂದಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.
ಈ ವೇಳೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಉದ್ಯಮಿ ಬಿ.ವಿ.ಬೈರೇಗೌಡ, ಒಕ್ಕಲಿಗರ ಸಂಘದ ಕರ‍್ಯಾಧ್ಯಕ್ಷ ಬಿ.ವಿ.ರಾಜಶೇಖರ್ ಗೌಡ, ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡ, ಯುವ ಮುಖಂಡ ಬಿ.ಜಿ.ನಾರಾಯಣಗೌಡ ಅವರು ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಫೋಟೋ: 4 ಹೆಚ್‌ಎಸ್‌ಕೆ 2ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಬೈರೇಗೌಡ, ಬಿ.ವಿ.ರಾಜಶೇಖರ್‌ಗೌಡ ಇತರರು ಅಭಿನಂದಿಸಿದರು.