ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಬಿ.ಎಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ 13.5 ಕೋಟಿ ರು. ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ತಮ್ಮ ಇಲಾಖೆಗೆ ಬಹಳ ಮಹತ್ವದ ದಿನವಾಗಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಡಿ ಸಮಾಜದ ಸಹಭಾಗಿತ್ವದೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಹೊಂದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನಡಿ ಮತ್ತಷ್ಟು 24 ಕೆಪಿಎಸ್ ಶಾಲೆಗಳು ಮಂಜೂರಾಗಿವೆ ಎಂದರು.ಸಿಎಸ್‌ಆರ್ ನಿಧಿಯಡಿ ರಾಜ್ಯದಾದ್ಯಂತ 1000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್‌ನ ನೆರವಿನಿಂದ ನಿರ್ಮಾಣವಾಗಲಿರುವ ಈ ಕಟ್ಟಡದಲ್ಲಿ 35 ಸುಸಜ್ಜಿತ ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಅಕ್ಷರ ದಾಸೋಹ ಭವನ ನಿರ್ಮಾಣವಾಗಲಿದೆ. ಕಟ್ಟಡವನ್ನು ಒಂದರಿಂದ ಎರಡು ವರ್ಷದೊಳಗೆ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದರು.
----
ಕೆ.ವಿಜಯ್ ಕುಮಾರ್. ಅಧ್ಯಕ್ಷ, ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್
ಇದು ಶಿವಮೊಗ್ಗಕ್ಕೆ ಅವಿಸ್ಮರಣೀಯ ದಿನವಾಗಿದ್ದು, ಶ್ರಾವಣ ಮಾಸದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದು ಕೇವಲ ಕಾರ್ಯಕ್ರಮವಲ್ಲ, ಒಂದು ಮಹತ್ವದ ಕಾರ್ಯ. 13.5 ಕೋಟಿ ರು. ವೆಚ್ಚದ ಯೋಜನೆ ಸಣ್ಣ ವಿಷಯವಲ್ಲ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿರುವ ಸಚಿವ ಮಧು ಬಂಗಾರಪ್ಪ, ಎಜಾಕ್ಸ್ ಸಂಸ್ಥೆಯ ವಿಜಯ್ ಕುಮಾರ್ ಹಾಗೂ ಎಲ್ಲ ಸಹಭಾಗಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಈ ಯೋಜನೆ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಇತಿಹಾಸದಲ್ಲಿ ಪ್ರಮುಖ ಮೈಲುಗಲ್ಲಾಗಲಿದೆ.