ಕೋಟೆ ನಾಡು ಚಿತ್ರದುರ್ಗದಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆ

KannadaprabhaNewsNetwork |  
Published : Nov 02, 2023, 01:02 AM IST
ಚಿತ್ರದುರ್ಗ  ಮೂರನೇ ಪುಟಕ್ಕೆ  | Kannada Prabha

ಸಾರಾಂಶ

ಸುವರ್ಣ ಸಂಭ್ರಮದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಾಪ್ರಭು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಕಹಳೆ ವಾದನ, ಹಗಲು ವೇಷ, ತಾಶರಂ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು.

ನಾರಿಶಕ್ತಿ, ಚಂದ್ರಯಾನ, ಶಕ್ತಿ, ಗೃಹಜ್ಯೋತಿ ಯೋಜನೆಗಳ ಕುರಿತ ಟ್ಯಾಬ್ಲೂ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಸುವರ್ಣ ಸಂಭ್ರಮದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಾಪ್ರಭು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಕಹಳೆ ವಾದನ, ಹಗಲು ವೇಷ, ತಾಶರಂ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು. ಶಿಕ್ಷಣದ ಶಕ್ತಿ ಸಾರುವ ಶಾಲಾ ಶಿಕ್ಷಣ ಇಲಾಖೆಯ ಸ್ತಬ್ದಚಿತ್ರ, ದೇಶದಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಮೂಲಕ ಚಂದ್ರಯಾನ ಸಾಧನೆ ಶಿಕ್ಷಣ ಹೇಗೆ ಇಂಬು ನೀಡಿದೆ ಎಂಬುದನ್ನು ಸಾದರ ಪಡಿಸಿತು. ಇದರೊಂದಿಗೆ ಶಾಲಾ ಶಿಕ್ಷಣ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿತು. ಪ್ರವಾಸೋದ್ಯಮ ಇಲಾಖೆಯ ದೇಶದ ನಾರಿಯರ ಸಾಧನೆ ಅನಾವರಣಗೊಳಿಸಿದ ನಾರಿಶಕ್ತಿಯ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು. ದೇಶದ ಪ್ರಸ್ತುತ ರಾಷ್ಟ್ರಪತಿ ದ್ರೌಪದಿ ಮುರ್ಮು, ಶರಣೆ ಅಕ್ಕಮಹಾದೇವಿ, ವೀರ ವನಿತೆ ಒನಕೆ ಓಬವ್ವ, ಸಾಲುಮರದ ತಿಮ್ಮಕ್ಕ, ಬಾಹ್ಯಾಕಾಶ ಯಾತ್ರಿ ಕಲ್ಪನಾ ಚಾವ್ಲಾ, ಒಲಿಂಪಿಕ್ ಪದಕ ವಿಜೇತ ಬಾಕ್ಸಿಂಗ್ ಪಟು ಮೇರಿ ಕೋಮ್ ಅವರ ಭಾವಚಿತ್ರಗಳು ಸ್ತಬ್ದಚಿತ್ರದಲ್ಲಿ ಕಂಗೊಳಿಸಿದವು. ಸಾರಿಗೆ ಇಲಾಖೆಯು ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಕರ್ಯ ಕಲ್ಪಿಸಿದ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಕುರಿತು ತಯಾರಿಸಿದ್ದ ಸ್ತಬ್ದಚಿತ್ರ ಗಮನ ಸೆಳೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಿರ್ಮಿಸಲಾದ ಸ್ತಬ್ಧಚಿತ್ರ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಎಚ್ಚರಿಸಿತು. ಬಾಲ್ಯ ವಿವಾಹಕ್ಕೆ ಕಾರಣರಾದರೆ ಕಾನೂನಿನ ಪ್ರಕಾರ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಕ್ಕಳ ಹಕ್ಕುಗಳನ್ನು ಗೌರವಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಹಕಾರಿಯಾಗಲು ಸರ್ಕಾರ ತಂದಿರುವ ಯೋಜನೆಗಳ ಮಾಹಿತಿ ನೀಡಿತು. ಇದಲ್ಲದೇ ಬೆಸ್ಕಾಂನ ಗೃಹಜ್ಯೋತಿ, ಆರೋಗ್ಯ ಇಲಾಖೆಯ ಸ್ತನ್ಯಪಾನ ಮಹತ್ವ ಸಾರುವ ಹಾಗೂ ಅರಣ್ಯ, ಕೃಷಿ, ಅಬಕಾರಿ ಇಲಾಖೆ, ನಗರ ಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ತಬ್ಧ ಚಿತ್ರಗಳು ಸರ್ಕಾರ ಯೋಜನೆಯ ಮಾಹಿತಿ ನೀಡಿದವು. ಗಾಂಧಿ ವೃತ್ತ, ಎಸ್.ಬಿಎಂ ವೃತ್ತ, ಓಬವ್ವ ವೃತ್ತದ ಮೂಲಕ ಮೆರವಣಿಗೆ ಪೊಲೀಸ್ ಕವಾಯತು ಮೈದಾನ ತಲುಪಿತು. ಶಿಕ್ಷಣ ಇಲಾಖೆ ಚಂದ್ರಯಾನ, ಸಾರಿಗೆ ಇಲಾಖೆ ಶಕ್ತಿ ಯೋಜನೆ, ಅರಣ ಇಲಾಖೆ ವನ್ಯಜೀವಿ ಸಂರಕ್ಷಣೆ ಮಹತ್ವ ಸಾರಿದ ಸ್ತಬ್ಧಚಿತ್ರಗಳು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು