ಕಾಂಗ್ರೆಸ್‌ ನುಡಿದಂತೆ ನಡೆಯುವ ಪಕ್ಷ

KannadaprabhaNewsNetwork |  
Published : Apr 07, 2024, 01:46 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪ್ರಚಾರಕಾರ್ಯ ಕೈಗೊಂಡಿದ್ದರು. | Kannada Prabha

ಸಾರಾಂಶ

ಕಾಂಗ್ರೆಸ್ ಮತದಾರರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೊಳಿಸಿ, ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಿದ್ದೇವೆ

ಮುಂಡರಗಿ: ಕೊಟ್ಟ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಅವರು ಶನಿವಾರ ಹಾವೇರಿ ಲೋಕಸಭಾ ಚುನಾವಣೆಯ ಅಂಗವಾಗಿ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಕೊರ್ಲಹಳ್ಳಿ, ಬೀಡನಾಳ, ಸಿಂಗಟಾಲೂರು ಹಾಗೂ ಹೆಸರೂರು ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕಳೆದ 2023ರಲ್ಲಿ ಜರುಗಿದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೊಳಿಸಿ, ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಿದ್ದೇವೆ ಎಂದರು.

ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ₹75,000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ನಾವು ನಮ್ಮ ಕಾಂಗ್ರೆಸ್ ಸಾಧನೆಗಳನ್ನು ಜನತೆಗೆ ತಲುಪಿಸುವ ಕಾರ್ಯ ಮಾಡೋಣ ಎಂದು ಹೇಳಿದರು.

ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ ಮಾತನಾಡಿ, ಸಿದ್ದರಾಮಯ್ಯ ಅವರದ್ದು ಬದ್ಧತೆಯುಳ್ಳ ಬಡವರ ಹಿಂದುಳಿದವರ, ಮಹಿಳೆಯರ ಪರವಾದ ಪಕ್ಷ. ರಾಜ್ಯದ ಹಾಗೂ ದೇಶದ ಅಭಿವೃದ್ಧಿಯಾಗಬೇಕಾದರೆ ಎರಡೂ ಕಡೆಗಳಲ್ಲಿ ಒಂದೇ ಪಕ್ಷ ಅಧಿರಕಾರದಲ್ಲಿರಬೇಕು ಎಂದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಹುಡಾ ಅಧ್ಯಕ್ಷ ಸಾಕೀರ್ ಸನದಿ ಮಾತನಾಡಿದರು.

ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಟಿ. ಈಶ್ವರ, ಜಿಪಂ ಮಾಜಿ ಅಧ್ಯಕ್ಷ ಶೋಭಾ ಮೇಟಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಡಿ. ಮಕಾಂದಾರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ, ಹೇಮಂತಗೌಡ ಪಾಟೀಲ, ಕಾರ್ಯದರ್ಶಿ ಶೇಖರ ಜುಟ್ಲನ್ನವರ, ರುದ್ರಗೌಡ ಪಾಟೀಲ, ವಿ.ಎಲ್. ನಾಡಗೌಡ್ರ, ನಾಗರಾಜ ಹೊಂಬಳಗಟ್ಟಿ, ಮಂಜುನಾಥ ಮುಂಡವಾಡ, ಶಿಗ್ಲಿ ರಾಮಣ್ಣ, ಭಾಗ್ಯಶ್ರೀ ಬಾಬಣ್ಣ, ಸುರೇಶ ಮಾಗಡಿ, ಡಿ.ಎಂ. ಕಾತರಕಿ, ಪೂಜಾ ಕಮ್ಮಾರ, ಧ್ರುವಕುಮಾರ ಹೊಸಮನಿ, ಮಹೇಶ ಕುರಿ, ಇಬ್ರಾಹಿಂಸಾಬ್ ಸಾಬಣ್ಣವರ ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...