ಕನ್ನಡಪ್ರಭ ವಾರ್ತೆ ಕೋಲಾರ
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ೨೦೨೫- ೨೬ನೇ ಸಾಲಿನ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಕರ್ತವ್ಯದ ವೇಳೆ ಮಡಿದ ವೀರರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
೧೯೫೯ರ ಅ.೨೧ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಗಡಿ ಕಾಯುತ್ತಿದ್ದ ೧೦ ಭಾರತೀಯ ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಧುನಿಕ ಶಸ್ತ್ರ ಹೊಂದಿದ್ದ ಚೀನಾ ಸೈನಿಕರು ದಾಳಿ ಮಾಡಿದರು. ಸಂಖ್ಯೆಯಲ್ಲಿ ಕಡಿಮೆಯಿದ್ದರೂ ನಮ್ಮ ಯೋಧರು ದಿಟ್ಟತನದಿಂದ ಹೋರಾಡಿ ಪ್ರಾಣತ್ಯಾಗ ಮಾಡಿದರು. ಅವರ ಸ್ಮರಣಾರ್ಥ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಸ್ಮರಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಮಾತನಾಡಿ, ೨೦೨೫-೨೬ನೇ ಸಾಲಿನಲ್ಲಿ ದೇಶಾದ್ಯಂತ ಕರ್ತವ್ಯದ ವೇಳೆ ೧೫೪ ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದು, ಅದರಲ್ಲಿ ಕರ್ನಾಟಕದ ೫ ಜನರಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೂರು ಸುತ್ತು ಕುಶಾಲತೋಪು ಸಿಡಿಸಿ, ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ, ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.