ನವಲಗುಂದ:
ಗ್ರಾಮದ ಕೂಲಿ ಕಾರ್ಮಿಕ ಮಹಾದೇವ ಬಾಗೂರ ಆತ್ಯಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ. ಸಮಯ ಪ್ರಜ್ಞೆ ಮೆರೆದ ನವಲಗುಂದ ಪೊಲೀಸ್ ಠಾಣಿ ಸಿಬ್ಬಂದಿ ಯುವಕನ ಮನವೊಲಿಸಿ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನಾಂ ವೀರಾಪುರ ಗ್ರಾಮದಲ್ಲಿ ಮಾನ್ಯಾ ಪಾಟೀಲ ಮರ್ಯಾದಾ ಹತ್ಯೆ ಖಂಡಿಸಿ ಶುಕ್ರವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದ ಇದೇ ವ್ಯಕ್ತಿ ಶನಿವಾರ ಸಂಜೆ 5ರ ಸುಮಾರಿಗೆ ಏಕಾಏಕಿ ಗ್ರಾಮದಲ್ಲಿನ ನೀರಿನ ಟ್ಯಾಂಕರ್ ಏರಿ ಮಹಿಳೆಯ ಹತ್ಯೆಗೆ ಸರ್ಕಾರ ವಿಶೇಷ ತಂಡ ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಮೃತಳ ಸಾವಿಗೆ ನ್ಯಾಯ ಕೊಡಿಸಬೇಕು. ತನಿಖೆಯಲ್ಲಿ ಅಮಾಯಕ ಪೊಲೀಸ್ ಪೇದೆಗಳನ್ನು ಅಮಾನತು ಮಾಡುವ ಮೂಲಕ ಬಲಿಪಶು ಮಾಡಲಾಗಿದೆ. ಇದು ಖಂಡನೀಯ. ಇದರಿಂದ ಪೊಲೀಸ್ ಸಿಬ್ಬಂದಿ ಮಾನಸಿಕ ಸ್ಥೈರ್ಯ ಕಳೆದುಕೊಳ್ಳುವಂತಾಗಿದೆ. ಕೂಡಲೆ ಈ ಅಮಾನತು ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾನೆ.ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಜನಾರ್ಧನ ಭಟ್ರಳ್ಳಿ ಗ್ರಾಮಕ್ಕೆ ತೆರಳಿ ಗ್ರಾಮಸ್ಥರೊಂದಿಗೆ ಸೇರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯ ಮನವೊಲಿಸಿ ಕೆಳಗಿಳಿಸಿದರು.