ಶಿವಮೊಗ್ಗದಲ್ಲಿ ವ್ಯಕ್ತಿಗೆ ಕೊರೋನಾ ಪಾಸಿಟಿವ್‌ ದೃಢ

KannadaprabhaNewsNetwork |  
Published : May 28, 2025, 01:56 AM IST

ಸಾರಾಂಶ

ಜಿಲ್ಲೆಯಲ್ಲಿ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಕೊರೋನಾ ಪಾಸಿಟಿವ್‌ ಪತ್ತೆಯಾಗಿದೆ. ಹಾವೇರಿಯ 70 ವರ್ಷದ ವೃದ್ಧರೊಬ್ಬರಲ್ಲಿ ಇದು ಕಾಣಿಸಿಕೊಂಡಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಕೊರೋನಾ ಪಾಸಿಟಿವ್‌ ಪತ್ತೆಯಾಗಿದೆ. ಹಾವೇರಿಯ 70 ವರ್ಷದ ವೃದ್ಧರೊಬ್ಬರಲ್ಲಿ ಇದು ಕಾಣಿಸಿಕೊಂಡಿದೆ. ಇವರು ಮೇ 19 ರಂದು ಹೃದಯ ಸಂಬಂಧಿ ರೋಗದಿಂದ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಯಲ್ಲಿ ಅವರು ಕಫ ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ಕೊರೋನಾ ಟೆಸ್ಟ್‌ ಗೆ ಒಳಪಡಿಸಲಾಗಿತ್ತು. ಈ ನಡುವೆ ಆರೋಗ್ಯ ಸಮಸ್ಯೆಯಿಂದ ಗುಣಮುಖರಾಗಿದ್ದ ಇವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದರು. ಅವರು ಮನೆ ಸೇರಿದ ಬಳಿಕ ಸೋಮವಾರ ರಾತ್ರಿ ಟೆಸ್ಟ್‌ ವರದಿ ಕೈಸೇರಿದ್ದು, ಇದರಲ್ಲಿ ಕೊರೋನಾ ಪಾಸಿಟಿವ್‌ ಇರುವುದು ಗೊತ್ತಾಗಿದೆ. ತಕ್ಷಣವೇ ಅವರಿಗೆ ಮಾಹಿತಿ ನೀಡಿ ಕ್ವಾರಂಟೈನ್‌ ಆಗಿರಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ