ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಸದೃಢ: ಡಿಸಿ ಸ್ವರೂಪ ಟಿ.ಕೆ.

KannadaprabhaNewsNetwork |  
Published : Sep 02, 2025, 01:01 AM IST
01ಮಾನಸಿಕ | Kannada Prabha

ಸಾರಾಂಶ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ರೂಪಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ರೂಪಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿಯನ್ನು ಅನುಷ್ಠಾನಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿರುವ ಮಾನಸಿಕ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ದೆ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಯ ರಹಿತ ಶಿಕ್ಷಣ ನೀಡುವ ಕುರಿತು ಸರ್ವೋಚ್ಚ ನ್ಯಾಯಾಲಯದ ಹಾಗೂ ಸರ್ಕಾರದ ನಿರ್ದೇಶನದನ್ವಯ ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ಅನುಷ್ಟಾನಗೊಳಿಸುವುದು ಅವಶ್ಯಕ ಎಂದು ಹೇಳಿದರು.

ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡಕ್ಕೆ ಒಳಗಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸಮಾಲೋಚನೆ ಹಾಗೂ ಸಹಾಯ ಮಾಡಲು ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚಕರನ್ನು ನೇಮಿಸಿ, ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದ ಅವರು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಮಾನಸಿಕ ತಜ್ಜರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''