ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಮನವಿ

KannadaprabhaNewsNetwork |  
Published : Aug 06, 2024, 12:41 AM IST
ಫೋಟೋ : ೫ಎಚ್‌ಎನ್‌ಎಲ್೧ | Kannada Prabha

ಸಾರಾಂಶ

ಅರ್ಥಪೂರ್ಣ ಸಂಭ್ರಮಾಚರಣೆ ಮೂಲಕ ೭೮ನೇ ಸ್ವಾತಂತ್ರ್ಯ ದಿನೋತ್ಸವವನ್ನು ನಡೆಸಲು ಎಲ್ಲ ಇಲಾಖೆಯ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಶಾಲಾ ಕಾಲೇಜುಗಳು ಸಹಕರಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಮನವಿ ಮಾಡಿದರು.

ಹಾನಗಲ್ಲ: ಅರ್ಥಪೂರ್ಣ ಸಂಭ್ರಮಾಚರಣೆ ಮೂಲಕ ೭೮ನೇ ಸ್ವಾತಂತ್ರ್ಯ ದಿನೋತ್ಸವವನ್ನು ನಡೆಸಲು ಎಲ್ಲ ಇಲಾಖೆಯ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಶಾಲಾ ಕಾಲೇಜುಗಳು ಸಹಕರಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಮನವಿ ಮಾಡಿದರು.ಸೋಮವಾರ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಒಂದಷ್ಟು ಕಡಿಮೆಯಾಗಿದೆ. ಆದಾಗ್ಯೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ, ಬೆಳಗಿನ ಮೆರವಣಿಗೆಯಲ್ಲಿಯೂ ಮಕ್ಕಳಿಗೆ ತೊಂದರೆಯಾಗದಂತೆ ಗಮನ ಕೊಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು, ಸಾಧಕರು, ಸಮಾಜ ಸೇವಕರು, ಆದರ್ಶ ಕೃಷಿಕರು, ಬಿರು ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಉಚಿತ ನೀರು ಪೂರೈಸಿದ ರೈತರು ಸೇರಿದಂತೆ ಸಮಾಜಕ್ಕೆ ಹಿತ ಬಯಸಿದವರನ್ನು ಗುರುತಿಸಿ ಗೌರವಿಸಲಾಗುವುದು. ಇದು ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಶಿಸ್ತು ಸಂಯಮ ಶಾಂತಿಯಿಂದ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಲು ಎಲ್ಲರೂ ಸಹಕರಿಸಿ ಎಂದು ತಹಸೀಲ್ದಾರ್‌ ಎಸ್. ರೇಣುಕಮ್ಮ ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಾದ ಮೋಹನಕುಮಾರ, ವೈ.ಕೆ. ಜಗದೀಶ, ಎಸ್. ಆನಂದ, ವಿ.ವಿ. ಸಾಲಿಮಠ, ಟಿ.ಕೆ. ಕಾಂಬಳೆ, ಚನ್ನವೀರಶೆಟ್ಟಿ ರೂಡಗಿ, ಮಂಜುನಾಥ ಬಣಕಾರ, ವಿವಿಧ ಸಂಘಟನೆಗಳ ಪ್ರಮುಖರಾದ ಎಂ.ಎಸ್ .ಪಾಟೀಲ, ಸಿಕಂದರ ಓಲೇಕಾರ, ಸುರೇಶ ಲಚಮಣ್ಣನವರ, ನಾಗರಾಜ ಮಲ್ಲಮ್ಮನವರ. ಗಂಗಮ್ಮ ಹಿರೇಮಠ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌