ಬೆಂಗಳೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ 1888ರಲ್ಲಿ ಮೈಸೂರು ಮಹಾರಾಜರು ನಿರ್ಮಿಸಿರುವ 102 ಎಕರೆ ವಿಸ್ತೀರ್ಣದ ಕೆರೆಯ ಜಲಾನಯನ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅಕ್ರಮವಾಗಿ ನಿವೇಶನಗಳನ್ನು ರಚಿಸಿ ಸ್ಥಳೀಯರಿಗೆ ಮಂಜೂರು ಮಾಡಿ ಮತ್ತು ಖಾತೆ ನೀಡಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
- ಅಕ್ರಮವಾಗಿ ನಿವೇಶನ ರಚಿಸಿದ ಕಡೂರಿನ ಚೌಳಹಿರಿಯೂರು ಗ್ರಾಪಂ । ಹೈಕೋರ್ಟ್ ನೋಟಿಸ್
--
- ಕಡೂರು ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ 1888ರಲ್ಲಿ ಮೈಸೂರು ಮಹಾರಾಜರು ನಿರ್ಮಿಸಿರುವ 102 ಎಕರೆ ವಿಸ್ತೀರ್ಣದ ಕೆರೆ
- ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅ. 28ಕ್ಕೆ ಮುಂದೂಡಿತು
- ಚೌಳಹಿರಿಯೂರು ಗ್ರಾಮದ ಸರ್ವೇ ನಂಬರ್ 5ರಲ್ಲಿನ 102 ಎಕರೆ 33 ಗುಂಟೆ ವಿಸ್ತೀರ್ಣದ ಜಾಗದಲ್ಲಿ ಮೈಸೂರು ಮಹಾರಾಜರು 1888ರಲ್ಲಿ ಕೆರೆ ನಿರ್ಮಿಸಿದ್ದರು.ಕನ್ನಡಪ್ರಭ ವಾರ್ತೆ ಬೆಂಗಳೂರು
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ 1888ರಲ್ಲಿ ಮೈಸೂರು ಮಹಾರಾಜರು ನಿರ್ಮಿಸಿರುವ 102 ಎಕರೆ ವಿಸ್ತೀರ್ಣದ ಕೆರೆಯ ಜಲಾನಯನ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅಕ್ರಮವಾಗಿ ನಿವೇಶನಗಳನ್ನು ರಚಿಸಿ ಸ್ಥಳೀಯರಿಗೆ ಮಂಜೂರು ಮಾಡಿ ಮತ್ತು ಖಾತೆ ನೀಡಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕೆರೆ ಜಲಾನಯನ ಪ್ರದೇಶದಲ್ಲಿನ ಒತ್ತುವರಿ ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಜಗದೀಶ್ ಸೇರಿ ಐವರು ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗಿಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಸಣ್ಣ ನೀರಾವರಿ ಕಾರ್ಯಕಾರಿ ಎಂಜಿನಿಯರ್‌ಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ, ಕೆರೆ ಜಲಾನಯನ ಪ್ರದೇಶದಲ್ಲಿ ಒತ್ತುವರಿ ನಡೆದು ನಿವೇಶನಗಳನ್ನು ರಚಿಸಿರುವ ಪ್ರಕರಣದ ಬಗ್ಗೆ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅ. 28ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಚೌಳಹಿರಿಯೂರು ಗ್ರಾಮದ ಸರ್ವೇ ನಂಬರ್ 5ರಲ್ಲಿನ 102 ಎಕರೆ 33 ಗುಂಟೆ ವಿಸ್ತೀರ್ಣದ ಜಾಗದಲ್ಲಿ ಮೈಸೂರು ಮಹಾರಾಜರು 1888ರಲ್ಲಿ ಕೆರೆ ನಿರ್ಮಿಸಿದ್ದರು. ಸದ್ಯ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಗ್ರಾಮ ಪಂಚಾಯಿತಿಯಿಂದ ಅಕ್ರಮವಾಗಿ ನಿವೇಶನ ರಚನೆ ಮಾಡಲಾಗಿದೆ.
ಆ ನಿವೇಶನಗಳನ್ನು ಸ್ಥಳೀಯರಿಗೆ ಮಂಜೂರು ಮಾಡಿ, ಖಾತಾ ವಿತರಿಸಲಾಗಿದೆ. ನಿವೇಶನ ಪಡೆದವರು ಕಟ್ಟಡ ಸಹ ನಿರ್ಮಿಸುತ್ತಿದ್ದಾರೆ. ಈ ಐತಿಹಾಸಿಕ ಕೆರೆಯನ್ನು ಸಂರಕ್ಷಿಸಬೇಕಿದೆ. ಇದರಿಂದ ಕೆರ ಜಾಗದ ಒತ್ತುವರಿ ಮತ್ತು ಅದಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ನ್ಯಾಯಪೀಠವನ್ನು ಕೋರಿದರು.
ಹಾಗೆಯೇ, ಪ್ರಕರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪ್ರತಿವಾದಿ ಮಾಡಲು ಮತ್ತು ಸ್ಥಳಕ್ಕೆ ಭೇಟಿ ನೀಡಿ ಸರ್ವೇ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.