ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ನ್ಯಾ.ವಿಜಯ್ ಹೇಳಿಕೆ ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಪೊಲೀಸ್ ಮತ್ತು ವಕೀಲರು ಪ್ರತಿನಿತ್ಯವೂ ಇಲಾಖಾ ಕಾರ್ಯಗಳ ಹಿನ್ನೆಲೆಯಲ್ಲಿ ಪರಸ್ವರ ಭೇಟಿ ಮಾಡಿ ಚರ್ಚಿಸುತ್ತಾರೆ. ಜೊತೆಯಲ್ಲಿ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳೂ ಸಹ ಇಂತಹ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಎಲ್ಲರ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಹಿರಿಯ ನ್ಯಾಯಾಧೀಶ ಶಮೀರ್‌ಪಿ.ನಂದ್ಯಾಲ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಚ್.ಆರ್.ಹೇಮಾ, ತಹಸೀಲ್ದಾರ್ ರೇಹಾನ್ ಪಾಷ, ಡಿವೈಎಸ್‌ಪಿ ಟಿ.ಬಿ.ರಾಜಣ್ಣ, ವೃತ್ತ ನಿರೀಕ್ಷಕ ಹನುಮಂತಪ್ಪ ಸಿರೇಹಳ್ಳಿ, ಆರ್.ಎಫ್.ದೇಸಾಯಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಗರಾಜು, ಉಪಾಧ್ಯಕ್ಷ ಬಿ.ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಸಿದ್ದರಾಜು, ಖಜಾಂಚಿ ರುದ್ರಯ್ಯ, ಪಿಎಸ್‌ಐ ಮಾರುತಿ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ನಿತಿನ್, ಸಂಶೋಧನಾ ವಲಯ ಅರಣ್ಯ ಮುಸ್ತಾನ್, ಎಇಇ ವಿನಯ್, ಆರೋಗ್ಯ ನಿರೀಕ್ಷಕ ಗಣೇಶ್, ಪತ್ರಕರ್ತ ವಿ.ವೀರೇಶ್, ನಾಗರಾಜು, ತಿಮ್ಮಣ್ಣ ಮುಂತಾದವರು ಉಪಸ್ಥಿತರಿದ್ದರು.