ಜನಪರವಾದ ಬಜೆಟ್: ಶಾಸಕ ತಮ್ಮಯ್ಯ

KannadaprabhaNewsNetwork |  
Published : Feb 17, 2024, 01:16 AM IST
ಶಾಸಕ ಎಚ್‌.ಡಿ. ತಮ್ಮಯ್ಯ  | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ ತಮ್ಮ ಸುಧೀರ್ಘ ರಾಜಕೀಯ ಜೀವನದ 15ನೇ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲಿನ ಜನಪರವಾದ ಬಜೆಟ್ ಇಂದು ಮಂಡಿಸಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.

ಹಲವು ವರ್ಷಗಳ ಬೇಡಿಕೆಯಾಗಿದ್ದ ಸ್ಪೈಸ್‌ ಪಾರ್ಕ್‌ಗೆ ಅವಕಾಶ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಿಎಂ ಸಿದ್ದರಾಮಯ್ಯ ತಮ್ಮ ಸುಧೀರ್ಘ ರಾಜಕೀಯ ಜೀವನದ 15ನೇ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲಿನ ಜನಪರವಾದ ಬಜೆಟ್ ಇಂದು ಮಂಡಿಸಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.ಹಲವು ವರ್ಷಗಳ ಬೇಡಿಕೆಯಾಗಿದ್ದ ಸ್ಪೈಸ್‌ ಪಾರ್ಕ್‌ ಈ ಬಾರಿ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಅವಕಾಶ ನೀಡಲಾಗಿದೆ. ಇದರಿಂದ ಚಿಕ್ಕಮಗಳೂರು ಜಿಲ್ಲೆಯ ಸಾಂಬಾರು ಪದಾರ್ಥಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದಾಯಕವಾಗಲಿದೆ.ಪ್ರತಿ ಜಿಲ್ಲೆಗೆ ಡೇ ಕೇರ್ ಕಿಮೋ ಥೆರಪಿ ಕೇಂದ್ರಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪಿಸುವುದರಿಂದಾಗಿ ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇನ್ನಷ್ಟು ಸಬಲೀಕರಣಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.ರಾಜ್ಯದ ಹತ್ತು ಪ್ರವಾಸಿ ತಾಣಗಳಲ್ಲಿ ರೋಪ್ ವೇ ಮತ್ತು ಕೇಬಲ್ ಕಾರ್ ಅಳವಡಿಸಿ ಪ್ರವಾಸೋದ್ಯಮ ಉತ್ತೇಜಿಸಲು ಅವಕಾಶವಿದೆ. ಚಿಕ್ಕಮಗಳೂರಿನ ಪರಿಸರಕ್ಕೆ ಹಾನಿಯಾಗದಂತೆ ಸೂಕ್ತ ಸ್ಥಳದಲ್ಲಿ ರೋಪ್ ವೇ ಮತ್ತು ಕೇಬಲ್ ಕಾರ್ ಅಳವಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಾಪನೆಗೆ ಘೋಷಣೆ ಮಾಡಲಾಗಿದೆ. ಜವಳಿ ಪಾರ್ಕ್ ಇಲ್ಲದ 25 ಜಿಲ್ಲೆಗಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕ್ಷೇತ್ರವಾರು 54 ಕಿ.ಮೀ. ರಸ್ತೆಗಳ ನಿರ್ಮಾಣಕ್ಕೆ ಹಣ ಒದಗಿಸಲಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಹಣ ನೀಡುವ ಮೂಲಕ ಸರ್ವಸ್ಪರ್ಶಿ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದ್ದಾರೆ.

ಪೋಟೋ ಫೈಲ್‌ ನೇಮ್‌ 16 ಕೆಸಿಕೆಎಂ 3

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ