ಕಾರ್ಮಿಕ ಇಲಾಖೆಯಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ

KannadaprabhaNewsNetwork |  
Published : Feb 28, 2026, 01:30 AM IST
ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು | Kannada Prabha

ಸಾರಾಂಶ

ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಅವರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ (ಮುನ್ನ) ಅವರು ಇದ್ದರು.

ಸಿಎಸ್‌ಆರ್‌ ನೆರವಿನಡಿ ವಿಶೇಷಚೇತನರಿಗೆ ತ್ರಿಚಕ್ರ ವಾಹನ ನೀಡುವಂತೆ ಕಾರ್ಮಿಕ ಇಲಾಖೆಯಿಂದ ಉದ್ಯಮಗಳಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಎಲೆಕ್ಟ್ರಾನಿಕ್ ಮ್ಯಾನುಫ್ಯಾಕ್ಚರಿಂಗ್‌ ಹಾಗೂ ಕಲರ್ ಟೋನ್ ಟೆಕ್ಸ್ಟೈಲ್ ಕಂಪನಿ ವಿಶೇಷ ಚೇತನರಿಗೆ 2 ತ್ರಿಚಕ್ರ ವಾಹನಗಳನ್ನು ನೀಡಿವೆ.

ಈ ವಾಹನಗಳನ್ನು ಶುಕ್ರವಾರ ಇಬ್ಬರು ವಿಶೇಷ ಚೇತನರಿಗೆ ಗಣ್ಯರು ವಿತರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕರು, ಕಾರ್ಖಾನೆಯ ಎಚ್.ಆರ್‌ ಮತ್ತು ಜನರಲ್ ಮ್ಯಾನೇಜರ್ ಹಾಗೂ ಜಯೇಂದ್ರ, ರಂಗನಾಥ್ ಹೇಮಂತ್ ಈ ಸಂದರ್ಭದಲ್ಲಿ ಇದ್ದರು.

---

27ಸಿಎಚ್ಎನ್13ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ
56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ