ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಸೋಮನಹಳ್ಳಿ ಹಾಗೂ ಚಾಮನಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿ, ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನದ ಜಾಗದ ಕೊರತೆ ಇದೆ. ಜಾಗ ಇದ್ದರೂ ಸಹ ಮೂಲ ಸೌಲಭ್ಯಗಳು ಮರಿಚಿಕೆಯಾಗಿದೆ. ಹೀಗಾಗಿ ಅಭಿವೃದ್ಧಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.
ಸರ್ಕಾರ ಮೊದಲ ಹಂತದಲ್ಲಿ ಐದು ಗ್ರಾಮಗಳ ಸ್ಮಶಾನ ಅಭಿವೃದ್ಧಿಗೆ ತಲಾ 20 ಲಕ್ಷ ರು. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನಿರೀಕ್ಷೆ ಮಾಡಲಾಗಿದೆ ಎಂದರು.ಸೋಮನಹಳ್ಳಿ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಪ್ರೀತಮ್, ಹಳ್ಳಿಕರೆ ಮಾದೇಶ್, ಪುರಸಭೆ ಸದಸ್ಯ ಮೋಹನ್, ಮುಖಂಡರಾದ ಸಿಪಾಯಿ ಶ್ರೀನಿವಾಸ್, ಕೆ.ಎಂ.ರವಿ, ಚಾಮನಹಳ್ಳಿ ಕಾರ್ಯಕ್ರಮದಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಗ್ರಾಪಂ ಸದಸ್ಯರಾದ ಜಗ್ಗ , ಎಚ್.ಟಿ.ಅನಂತಕುಮಾರ್, ಮುಖಂಡರಾದ ಅಶೋಕ್, ಕುಚೇಲ, ಶೇಖರ್, ತ್ಯಾಗರಾಜು, ದೇಶಹಳ್ಳಿ ಶಂಕರ್ ಮತ್ತಿತರರು ಇದ್ದರು.ಮುಡಾ ಹಗರಣದಲ್ಲಿ ಸಿಎಂ ಹೆಸರು ಪ್ರಸ್ತಾಪ, ಬಿಜೆಪಿಯಿಂದ ಅಪಪ್ರಚಾರ: ಕೆ.ಎಂ.ಉದಯ್
ಈಗಾಗಲೇ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಆಳ್ವಿಕೆ ನಡೆಸಿರುವ ಸಿದ್ದರಾಮಯ್ಯ ಅವರು ಎಂದೋ ಹಣ ಆಸ್ತಿ ಮಾಡಿ ಶ್ರೀಮಂತರಾಗಬಹುದಿತ್ತು. ಆದರೆ, ಆತ ಬಿಡಿಗಾಸಿಗೂ ಆಸೆ ಪಡುವ ವ್ಯಕ್ತಿಯಲ್ಲ. ಹಗರಣ ಹೇಗೆ ಈಚೆಗೆ ಬರಲಿದೆ ಎಂದು ಪ್ರಶ್ನಿಸಿದರು.ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚುನಾವಣಾ ಸಮಿತಿ ತೀರ್ಮಾನ ಮಾಡುತ್ತದೆ. ಒಂದು ವೇಳೆ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿದರು ಆಶ್ಚರ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.