ಕನ್ನಡಪ್ರಭ ವಾರ್ತೆ ಯಳಂದೂರು
ಅವರು ಸೋಮವಾರ ತಾಲೂಕಿನ ಕೊಮಾರನಪುರ ಗ್ರಾಮದಲ್ಲಿ ಲಿಂಗಾಯತ ಬಡಾವಣೆಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಅನೇಕ ಕಡೆ ಸಾರ್ವಜನಿಕರು ಒತ್ತುವರಿ ತೆರವುಗೊಳಿಸಿ ರಸ್ತೆ ನಿರ್ಮಿಸಿ ಎಂದು ಮನವಿ ಮಾಡುತ್ತಾರೆ. ಸರ್ಕಾರಿ ಜಾಗವಾಗಿದ್ದಲ್ಲಿ ಇದನ್ನು ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುತ್ತಾರೆ. ಇದಕ್ಕೆ ಸ್ಥಳೀಯರು ಸಹಕರಿಸಬೇಕು ಎಂದರು.ಕೊಮಾರನಪುರ ಗ್ರಾಮದ ಈ ರಸ್ತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ೨೦ ಲಕ್ಷ ರು. ವೆಚ್ಚದಲ್ಲಿ ೮೦ ಮೀಟರ್ ಸಿಸಿ ಚರಂಡಿ, ೧೦೦ ಮೀಟರ್ ರಸ್ತೆ ಹಾಗೂ ೨ ಕಡೆ ಡೆಕ್ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಇಲ್ಲಿಗೆ ಆಗುವ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆಯ ಜೆಇ ಹಾಗೂ ಗುತ್ತಿಗೆದಾರನಿಗೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಮುಖಂಡರಾದ ವರ್ಧನ್, ರಂಗರಾಮು, ಪ್ರಕಾಶ್, ಕಂದಹಳ್ಳಿ ನಂಜುಂಡಸ್ವಾಮಿ, ಚಾಮುಲ್ ನಿರ್ದೇಶಕ ರೇವಣ್ಣ, ಶಿವಕುಮಾರ್, ವೀರಭದ್ರಸ್ವಾಮಿ ಸೇರಿದಂತೆ ಅನೇಕರು ಇದ್ದರು.