ಮತ್ತೆ ಚುರುಕು‌‌ ಪಡೆದ ಆಪರೇಷನ್ ಹಸ್ತ

KannadaprabhaNewsNetwork |  
Published : Nov 06, 2023, 12:45 AM IST
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಿವಾಸದಲ್ಲಿ ಕುಂದಗೋಳ ಹಾಗೂ ಶಿಗ್ಗಾಂವಿ ಮತಕ್ಷೇತ್ರದ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. | Kannada Prabha

ಸಾರಾಂಶ

ಧಾರವಾಡ-ಹಾವೇರಿ ಜಿಲ್ಲೆಯಲ್ಲಿ ಆಪರೇಷನ್‌ ಹಸ್ತ ಚುರುಕು ಪಡೆಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತಕ್ಷೇತ್ರದ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಧಾರವಾಡ-ಹಾವೇರಿ ಜಿಲ್ಲೆಯಲ್ಲಿ ಆಪರೇಷನ್‌ ಹಸ್ತ ಚುರುಕು ಪಡೆಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತಕ್ಷೇತ್ರದ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.

ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿವಾಸದಲ್ಲಿ ಬಿಜೆಪಿಯ ಹಲವು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಸಮ್ಮುಖದಲ್ಲಿ, ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡ್ರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಆಪರೇಷನ್‌ ಹಸ್ತದ ಕುರಿತು ಮಾತುಗಳು ಕೇಳಿಬರುತ್ತಿದ್ದವು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಬಿಜೆಪಿಯಲ್ಲಿ ಬಂಡಾಯವೆದ್ದ ಕಾರ್ಯಕರ್ತರನ್ನು ಹಾಗೂ ಪ್ರಮುಖರನ್ನು ಸೆಳೆಯುವಲ್ಲಿ ಸಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕುಂದಗೋಳ ಹಾಗೂ ಶಿಗ್ಗಾಂವಿಯ ಬಿಜೆಪಿ ಪ್ರಮುಖ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲಿಯೇ ಆಪರೇಶನ್‌ ಹಸ್ತ ನಡೆಯುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣ‍ವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ಬಹಳ ಮುಖ್ಯ-ಗಾಜೀಗೌಡ್ರ
ಮನರೇಗಾ ಮರುನಾಮಕರಣದಿಂದ ಬಡವರ ಅನ್ನದ ಬಟ್ಟಲಿಗೆ ಕನ್ನ