- ಚನ್ನಗಿರಿಯಲ್ಲಿ ಕನ್ನಡನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿಕೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಫೆಬ್ರವರಿ ತಿಂಗಳಿನಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿರುವ ಸಿ ಮತ್ತು ಡಿ ವಿಭಾಗದ ಭೂಮಿಯನ್ನು ಕಂದಾಯ ಇಲಾಖೆ ಮರುಪಡೆದು ಉಳುಮೆ ಮಾಡಿದ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ಕೊಡಬೇಕು ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯಿಂದ ತಹಸೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ವಿಚಾರಕ್ಕೆಸಂಬಂಧಿಸಿ ರಾಜ್ಯ ಸರ್ಕಾರ ಸ್ಪಂದಿಸಿರುವುದು ಸ್ವಾಗತಾರ್ಹ ಎಂದು ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರಕ್ಕಾಗಿ ತಾಲೂಕಿನ ಬಗರ್‌ಹುಕುಂ ರೈತರೊಂದಿಗೆ ಅಮ್ಮನಗುಡ್ಡದಿಂದ ತಾಲೂಕು ಕಚೇರಿವರೆಗೆ ಪಾದಾಯಾತ್ರೆ ನಡೆಸಿ ಮನವಿ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರ ಸದನದಲ್ಲಿ ಈ ವಿಚಾರವನ್ನು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದು ಸಂಘಟನೆ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದರು.
ಚನ್ನಗಿರಿ ತಾಲೂಕಿನ ಪ್ರತಿ ಗ್ರಾಮಕ್ಕೂ ಸ್ಮಶಾನ ಭೂಮಿಯ ಮಂಜೂರಾತಿ, ಸಾಸಿವೆಹಳ್ಳಿ ಏತನೀರಾವರಿ ತ್ವರಿತಗತ ಕಾಮಗಾರಿ, ಕೆರೆ ಒತ್ತವರಿಗಳ ತೆರವು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳ ವಿತರಣೆ ಸೇರಿದಂತೆ ಅನೇಕ ಸ್ಥಳೀಯ ಬೇಡಿಕೆಗಳ ಈಡೇಡಿಸುವಂತೆ ಪಾದಯಾತ್ರೆಯಲ್ಲಿ ಒತ್ತಾಯಿಸಲಾಗಿತ್ತು. ಬೇಡಿಕೆಗಳಲ್ಲಿ ಈಗ ಬಗರ್ ಹುಕುಂ ಸಾಗುವಳಿ ವಿಚಾರದಲ್ಲಿ ಸರ್ಕಾರದ ನಡೆ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದರು.ಬಡರೈತರು ಜೀವನ ನಿರ್ವಹಣೆಗಾಗಿ 1, 2 ಎಕರೆಗಳನ್ನು ಪಾರಂಪರಿಕವಾಗಿ ಸಾಗುವಳಿ ಮಾಡುತ್ತಿದ್ದಾರೆ. ಅಂತಹ ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸಾಗುವಳಿ ಪತ್ರ ಮಂಜೂರು ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ತಾಲೂಕು ಅಧ್ಯಕ್ಷ ಎಂ.ಅಣ್ಣೋಜಿ ರಾವ್, ನಗರ ಘಟಕ ಅಧ್ಯಕ್ಷ ನಟರಾಜ ರಾಯ್ಕರ್, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ನಾಗರಾಜ್, ಅರಶಿನಘಟ್ಟ ಸುರೇಶ್, ಸಚಿನ್, ತಾಲೂಕು ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀಸಾಗರ್, ಲತಾ ಸೇರಿದಂತೆ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.ಅರಣ್ಯ ಹಕ್ಕು ಕಾಯ್ದೆಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿರುವುದಕ್ಕಾಗಿ ಸಮಿತಿ ಸದಸ್ಯರು ಚನ್ನಗಿರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
- - -ಕೋಟ್ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳಿಸಿರುವ ಅರಣ್ಯ ಹಕ್ಕು ಕಾಯ್ದೆಯನ್ನು ಅದಷ್ಟು ಶೀಘ್ರವೇ ಪುರಸ್ಕರಿಸಿ, ಅರ್ಹ ಬಡ ಸಾಗುವಳಿ ರೈತರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧವೂ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು
- ಕೆ.ವಿ.ಕೃಷ್ಣಮೂರ್ತಿ, ರಾಜ್ಯಾಧ್ಯಕ್ಷ- - - -30ಕೆಸಿಎನ್‌ಜಿ1:
ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.