ಚನ್ನಮ್ಮನ 200ನೇ ವಿಜಯೋತ್ಸವ ರಾಷ್ಟ್ರೀಯ ಉತ್ಸವವಾಗಿ ಆಚರಿಸಲು ಮನವಿ

KannadaprabhaNewsNetwork |  
Published : Dec 23, 2023, 01:45 AM ISTUpdated : Dec 23, 2023, 01:46 AM IST
22ಎಮ್‌ಡಿಎಲ್‌ಜಿ3 | Kannada Prabha

ಸಾರಾಂಶ

ಕಿತ್ತೂರು ರಾಣಿ ಚನ್ನಮ್ಮನ 200ನೇ ವಿಜಯೋತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು ಎಂದು ನವದೆಹಲಿಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ಸಚಿವ ಜಿ.ಕಿಶನ್ ರೆಡ್ಡಿ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಕಿತ್ತೂರು ರಾಣಿ ಚನ್ನಮ್ಮನ 200ನೇ ವಿಜಯೋತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು ಎಂದು ನವದೆಹಲಿಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ಸಚಿವ ಜಿ.ಕಿಶನ್ ರೆಡ್ಡಿ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಿದರು.

1824ರಲ್ಲೇ ಸೂರ್ಯ ಮುಳಗದ ಬ್ರಿಟಿಷ್‌ ಸಾಮ್ರಾಜ್ಯದ ಎದುರು ಯುದ್ದ ನಡೆಸಿ ಬ್ರಿಟಿಷ ಅಧಿಕಾರಿ ಥ್ಯಾಕರೆಯ ಹತ್ಯೆಗೈಯುವ ಮೂಲಕ ಸ್ವಾತಂತ್ರ್ಯ ಹೋರಾಟದ ಮೊದಲ ಭಾರತೀಯ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಎಂದು ಸಚಿವರಿಗೆ ವಿವರಿಸಿದರು.

ಕಿತ್ತೂರು ಸಂಸ್ಥಾನ ಸಣ್ಣ ಸಂಸ್ಥಾನವಾದರೂ ಕೂಡ ಸ್ವಾಭಿಮಾನ ಮತ್ತು ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ್ ವಿರುದ್ಧ ಹೋರಾಡಿ 2024ಕ್ಕೆ 200 ವರ್ಷಗಳಾಗಲಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ತ್ಯಾಗ, ಬಲಿದಾನ ಮತ್ತು ಶೌರ್ಯಗಳ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ರಾಜ್ಯಮಟ್ಟದಲ್ಲಿ ವಿಜಯೋತ್ಸವವನ್ನು ಆಚರಿಸುತ್ತ ಬಂದಿದೆ. ಈ 200ನೇ ವರ್ಷದ ಸ್ಮರಣೆಗಾಗಿ ರಾಷ್ಟ್ರೀಯ ಉತ್ಸವವನ್ನು ಆಚರಿಸಲು ಕ್ರಮ ವಹಿಸಬೇಕು ಎಂದು ವಿನಂತಿಸಿದರು.

ಈ ಸ್ಮರಣೆಗಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು ಸಚಿವರಿಗೆ ವಿನಂತಿಸಿದರು. ಸಚಿವರು ಸಂಸದರ ಮನವಿಗೆ ಸ್ಪಂದಿಸಿದ್ದು, ಸೂಕ್ತ ನಿರ್ಧಾರ ಕೈಗೋಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಸಂಸದ ಅಣ್ಣಾಸಾಹೇಬ್‌ ಜೊಲ್ಲೆ, ರಾಜ್ಯಸಭಾ ಸಂಸದ ಕೆ.ನಾರಾಯಣ ಉಪಸ್ಥಿರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!