ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿಯ ಸುದರ್ಶನ್ ಅತಿಥಿಗೃಹದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಮಡಿಕೇರಿ ಕೊಡವ ಸಮಾಜವು ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ನಿರ್ವಹಿಸುವ ವಿಶ್ವಾಸವಿದ್ದು, ಕೊಡವ ಹೆರಿಟೇಜ್ ಕೇಂದ್ರದ ಜವಾಬ್ದಾರಿಯನ್ನು ಕೊಡವ ಸಮಾಜಕ್ಕೆ ನೀಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹಾಜರಿದ್ದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಮಾರ್ಗದರ್ಶನ ನೀಡಿದರು.ಸನ್ಮಾನ:
ಶಾಸಕ ಡಾ. ಮಂತರ್ ಗೌಡ ಅವರ ಆಡಳಿತಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆ ಹಾಗೂ ಕೊಡವ ಸಮಾಜಕ್ಕೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಮಡಿಕೇರಿ ಕೊಡವ ಸಮಾಜದ ವತಿಯಿಂದ ಒಡಿಕತ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಮಾಜಿ ಎಂಎಲ್‌ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ನಂದಿನೆರವಂಡ ರವಿ ಬಸಪ್ಪ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಪುತ್ತರಿರ ಕರುಣ್ ಕಾಳಯ್ಯ, ಮಂಡಿರ ಸದಾಮುದ್ದಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಪೆಮ್ಮುಡಿಯಂಡ ಉತ್ತಪ್ಪ, ಪುಲ್ಲೇರ ವಸಂತ ಹಾಗೂ ಪಾಲೆಯಂಡ ರೂಪಾ, ಕೂಪದಿರ ಜೂನ ವಿಜಯ್, ಶಾಂತೆಯಂಡ ಶ್ವೇತಾ ಕಾರ್ಯಪ್ಪ ಉಪಸ್ಥಿತರಿದ್ದರು.