ದಾಬಸ್‍ಪೇಟೆ: ದಕ್ಷಿಣಕಾಶಿ ಶಿವಗಂಗೆ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರವಾಸಿಗರು, ಭಕ್ತರು ಸಾರ್ವಜನಿಕರು ಸಹಕರಿಸಬೇಕು. ಶಿವಗಂಗೆ ಬೆಟ್ಟಕ್ಕೆ ಪ್ಲಾಸ್ಟಿಕ್ ಬಾಟಲು, ಕವರ್‌ಗಳನ್ನು ತೆಗೆದುಕೊಂಡು ಹೋಗುವುದನ್ನು ಹಂತ ಹಂತವಾಗಿ ನಿಷೇಧಿಸಲು ಕ್ರಮ ವಹಿಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು ತಿಳಿಸಿದರು.
ಸ್ವಚ್ಛತಾ ಕಾರ್ಯ:
ದಕ್ಷಿಣಕಾಶಿ ಶಿವಗಂಗೆ ಬೆಟ್ಟ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತಿ ದೊಡ್ಡ ಪ್ರವಾಸಿ ಧಾರ್ಮಿಕ ಕೇಂದ್ರ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು, ಭಕ್ತರು ಆಗಮಿಸುತ್ತಿದ್ದು, ಬರುವವರು ಪ್ಲಾಸ್ಟಿಕ್ ಬಾಟಲ್, ಕವರ್ ತ್ಯಾಜ್ಯಗಳನ್ನು ತಂದು ಬಳಸಿ ಬೆಟ್ಟದಲ್ಲೇ ಎಸೆದು ಹೋಗುತ್ತಿದ್ದು, ಶಿವಗಂಗೆ ಬೆಟ್ಟವೂ ಪ್ಲಾಸ್ಟಿಕ್ ಮಯವಾಗಿದೆ. ಆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ರೋಟರಿ ಸಂಸ್ಥೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಶಿವಗಂಗೆ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ ಎಂದರು.ಸ್ವಯಂ ಸಂಘಗಳು ಸಹಕಾರ
ತ್ಯಾಜ್ಯ ಸಂಗ್ರಹಿಸಿದ ಜಿಲ್ಲಾಧಿಕಾರಿ: ಜಿಲ್ಲಾಧಿಕಾರಿ ಬಸವರಾಜು ತಾವೇ ಸ್ವಚ್ಛತಾ ಕಾರ್ಯದ ನೇತೃತ್ವ ವಹಿಸಿ, ಶಿವಗಂಗೆ ಬೆಟ್ಟದಲ್ಲಿ ಕಂದಾಯ ಅಧಿಕಾರಿಗಳ ಜೊತೆಗೂಡಿ ಸುಮಾರು 3 ಗಂಟೆ ಕಾಲ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದು ಇತರ ಅಧಿಕಾರಿಗಳಿಗೆ ಮಾದರಿಯಾಗಿತ್ತು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಡಿಸಿಎಫ್ ಸಂತೋಷ್, ಪೊಲೀಸ್ ಇನ್ಸ್‌ಪೆಕ್ಟರ್ ರಾಜು, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ತಹಸೀಲ್ದಾರ್ ಶಶಿಧರ್, ರಾಜಸ್ವ ನಿರೀಕ್ಷಕರಾದ ಸುಂದರರಾಜು, ಮುನಿರಾಜು, ಗ್ರಾಮಲೆಕ್ಕಿಗ ಬಾಲಕೃಷ್ಣ, ಗೋಪಾಲ್, ನವೀನ್, ಧಾರ್ಮಿಕ ಧತ್ತಿ ಇಲಾಖೆಯ ಇಒ ಬಿಂದು, ಗ್ರಾಪಂ ಪಿಡಿಒ ಗಿರೀಶ್ ಕುಮಾರ್, ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ದೇವರಾಜು, ಶಶಿಧರ್, ಚನ್ನತಿಮ್ಮಯ್ಯ, ಯುವರಾಜು, ಕೇಶವಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ಹೊನ್ನಗಂಗಶೆಟ್ಟಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.ಪೋಟೋ 4 :
ಸೋಂಪುರ ಹೋಬಳಿಯ ಶಿವಗಂಗೆಯಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶಿವಗಂಗೆ ಕ್ಷೇತ್ರ ಸ್ವಚ್ಛತಾ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು ಉದ್ಘಾಟಿಸಿದರು.ಪೋಟೋ 5 :
ಸೋಂಪುರ ಹೋಬಳಿಯ ಶಿವಗಂಗೆಯಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಶಿವಗಂಗೆ ಕ್ಷೇತ್ರ ಸ್ವಚ್ಛತಾ ಕಾರ್ಯದಲ್ಲಿ ಬೆಂ.ಗ್ರಾ. ಜಿಲ್ಲಾಧಿಕಾರಿ ಬಸವರಾಜು ತೊಡಗಿರುವುದು.