ಬಾಗೇಶಪುರ ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, 5.50 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಗೇಶಪುರ ಗ್ರಾಮದಿಂದ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಬಳಿಕ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನತೆಯ ಬೆಂಬಲದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಅವಕಾಶ ದೊರೆತಿದೆ. ಪ್ರಸ್ತುತ ಸಚಿವನಾಗಿ ಸೇವೆ ಸಲ್ಲಿಸುತ್ತಿರುವುದರ ಹಿಂದೆ ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದ ಪ್ರಮುಖ ಕಾರಣವಾಗಿದೆ ಎಂದು ಶಿವಲಿಂಗೇಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಬಾಗೇಶಪುರ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಗ್ರಾಮವನ್ನು ರಾಜ್ಯದಲ್ಲೇ ಮಾದರಿ ಗ್ರಾಮವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ಬಾಗೇಶಪುರ ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, 5.50 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಗೇಶಪುರ ಗ್ರಾಮದಿಂದ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಬಳಿಕ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನತೆಯ ಬೆಂಬಲದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಅವಕಾಶ ದೊರೆತಿದೆ. ಪ್ರಸ್ತುತ ಸಚಿವನಾಗಿ ಸೇವೆ ಸಲ್ಲಿಸುತ್ತಿರುವುದರ ಹಿಂದೆ ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದ ಪ್ರಮುಖ ಕಾರಣವಾಗಿದೆ ಎಂದು ಶಿವಲಿಂಗೇಗೌಡ ಹೇಳಿದರು.ಬಾಗೇಶಪುರದ ಜನತೆ ತಮ್ಮ ರಾಜಕೀಯ ಬದುಕಿನ ಆರಂಭದಿಂದಲೂ ನೀಡಿರುವ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಗ್ರಾಮಸ್ಥರೊಂದಿಗಿನ ತಮ್ಮ ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಗ್ರಾಮದ ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಜನಸಂಪರ್ಕ ಸಭೆಯಲ್ಲಿ ಬಾಗೇಶಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಚಿವರು ಸ್ವೀಕರಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವಂತೆ ಸೂಚಿಸಿದರು.ಸಭೆಯಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅರುಣ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು, ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.