ಪ್ರಜಾಪ್ರಭುತ್ವದ ಮೌಲ್ಯ ಎತ್ತಿಹಿಡಿಯುವ ಸಂಕಲ್ಪ

KannadaprabhaNewsNetwork |  
Published : Nov 27, 2026, 02:00 AM IST
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ವಿವಿಧೆಡೆ ಗುರುವಾರ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹುಬ್ಬಳ್ಳಿ:

ತಾಲೂಕು ಆಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಗುರುವಾರ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಸ್ಮರಿಸಲಾಯಿತು. ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಸಂವಿಧಾನದ ತತ್ವ, ಮೌಲ್ಯ ಮತ್ತು ಆದರ್ಶಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಕೈಗೊಳ್ಳಲಾಯಿತು.

ಮಹಾನಗರ ಪಾಲಿಕೆ:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ದಿನ ಆಚರಿಸಲಾಯಿತು. ಉಪಮೇಯರ್ ರತ್ನಾಬಾಯಿ ನಾಝರೆ, ಸಭಾನಾಯಕ ಶಿವು ಮೆಣಸಿನಕಾಯಿ, ಆಯುಕ್ತ ಡಾ. ರುದ್ರೇಶ ಘಾಳಿ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಸವಣೂರ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ತಾಲೂಕು ಆಡಳಿತ:

ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಸಂವಿಧಾನ ದಿನಾಚರಣೆ ಜರುಗಿತು. ಕಾರ್ಯಕ್ರಮಕ್ಕೂ ಮುನ್ನ ಸ್ಟೇಷನ್ ರಸ್ತೆಯಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ತಾಪಂ ಇಒ ಸಂತೋಷ ಬಿರಾದಾರ ಪಾಟೀಲ, ಉಪ ತಹಶೀಲ್ದಾರ್ ಪ್ರವೀಣ ಪೂಜಾರ, ಎ.ಎಸ್. ಪಠಾಣ, ಎನ್.ಎಸ್. ಚಿಕ್ಕನಗೌಡ್ರ, ಸಂಜು, ಶ್ರೀನಿವಾಸ ಗಾಣಿಗೇರ, ಮುಖಂಡರಾದ ಪ್ರೇಮನಾಥ ಚಿಕ್ಕತುಂಬಳ, ಗುರುನಾಥ ಉಳ್ಳಿಕಾಶಿ, ಮಂಜುನಾಥ ಉಳ್ಳಿಕಾಶಿ, ಶೋಭಾ ಬಳ್ಳಾರಿ, ಚಂದ್ರಶೇಖರ ಯಾತಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾರಿಗೆ ಸಂಸ್ಥೆ:

ಇಲ್ಲಿನ ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ದಿನ ಆಚರಿಸಲಾಯಿತು. ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ, ಮುಖ್ಯ ಭದ್ರತಾ ಮತ್ತು ಜಾಗೃತಾ ಅಧಿಕಾರಿ ಗಣೇಶ ರಾಠೋಡ, ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಶ್ರೀನಿವಾಸಮೂರ್ತಿ ಸಿ.ಇ., ಮುಖ್ಯ ಕಾನೂನು ಅಧಿಕಾರಿ ಶ್ಯಾಮಲಾ ಕೆ.ಎನ್., ದಿವಾಕರ ಯರಗೊಪ್ಪ, ಜಗದಂಬಾ ಕೋಪರ್ಡೆ, ಶಶಿಧರ ಕುಂಬಾರ, ಸುಮನಾ ಯು., ಲಕ್ಷ್ಮೀನಾರಾಯಣ ಭಟ್, ಎಂ.ಬಿ. ಕಪಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಬಿಜೆಪಿ ಕಚೇರಿ:

ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ''''ಸಂವಿಧಾನ ಗೌರವ ದಿವಸ್'''' ಆಚರಿಸಲಾಯಿತು. ಪಾಲಿಕೆ ಸಭಾನಾಯಕ ಶಿವು ಮೆಣಸಿನಕಾಯಿ, ಮುಖಂಡರಾದ ಮಂಜುನಾಥ ಕಾಟಕರ್, ಲಕ್ಷ್ಮಣ ಬೀಳಗಿ, ಹನುಮಂತ ಹರಿವಾಣ, ಮಂಜುನಾಥ ಬಿಜ್ವಾಡ, ರವಿ ಬಂಕಾಪುರ, ಮಂಜುನಾಥ ಕೊಂಡಪಲ್ಲಿ, ಶ್ರೀಧರ ಕಂದಗಲ್, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.

ಆಮ್ ಆದ್ಮಿ ಪಕ್ಷ:

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ದಿನ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಮಲ್ಲಪ್ಪ ತಡಸದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅವಿನಾಶ ಸದಾನಂದ, ಸಂಘಟನಾ ಕಾರ್ಯದರ್ಶಿ ಹುಸೇನಬಾಷಾ ತಳೆವಾಡ, ಕಿಶೋರ್ ಶೆಟ್ಟಿ, ರೇವಣಸಿದ್ದಪ್ಪ ಹುಬ್ಬಳ್ಳಿ, ತಸ್ಲೀಮ್ ತಳೆವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷ:

ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಡಂಗನವರ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಅನ್ವರ ಮುಧೋಳ, ಲಿಂಗರಾಜ ಅಂಗಡಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿತ್ತರಂಜನ್ ಬೋಳಾರ್‌ಗೆ ರಾಜ್ಯದ ಶ್ರೇಷ್ಠ ಸಾಧಕ ಪುರಸ್ಕಾರ ‘ಕರುನಾಡ ರತ್ನ’ ಪ್ರಶಸ್ತಿ
ಸೌಜನ್ಯಾ ಪ್ರಕರಣದಲ್ಲಿ ಸಿಎಂ ಡಿಕೆಶಿ ನ್ಯಾಯ ಕೊಡಿಸಬೇಕು: ತಿಮರೋಡಿ