ರಾಜ್ಯದಲ್ಲಿ ಸಮಸ್ಯೆಗಳ ಸರಮಾಲೆ: ಸದನದಲ್ಲಿ ಶಾಸಕ ವೇದವ್ಯಾಸ್‌ ಕಾಮತ್‌ ಚಾಟಿ

KannadaprabhaNewsNetwork |  
Published : Feb 03, 2026, 03:00 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಸದನದಲ್ಲಿಇತ್ತೀಚೆಗೆ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕಳೆದ ಎರಡೂವರೆ ವರ್ಷದಿಂದ ದಿನಬಳಕೆಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ ಎಂದು ಆರೋಪಿಸಿದರು.

ಮಂಗಳೂರು: ‘ರಾಜ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ, ಎಲ್ಲವೂ ಸುಭಿಕ್ಷವಾಗಿದೆ’ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸುವ ಪ್ರಯತ್ನ ಮಾಡಿರುವುದು ಪ್ರಜಾಪ್ರಭುತ್ವದ ದುರಂತವಾಗಿದೆ. ವಾಸ್ತವದಲ್ಲಿ ರಾಜ್ಯ ಸಮಸ್ಯೆಗಳ ಸರಮಾಲೆಯಿಂದ ತುಂಬಿ ಹೋಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಹೇಳಿದರು.

ಶುಕ್ರವಾರ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡಿದ ಶಾಸಕರು, ಕಳೆದ ಎರಡೂವರೆ ವರ್ಷದಿಂದ ದಿನಬಳಕೆಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಜೈಲ್ ಜಾಮರ್ ಹಾಗೂ ಇ-ಖಾತಾ ಸಮಸ್ಯೆಯಿಂದಾಗಿ ಜನರು ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಫ್ರೀ ಅಕ್ಕಿ ಕೊಡುತ್ತೇವೆ ಹೇಳಿ ಈಗ ರೇಷನ್ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿಸಿದ್ದಾರೆ. ನನ್ನ ಮತ ಕ್ಷೇತ್ರದಲ್ಲಿಯೇ ಅರ್ಹರ ಬಿಪಿಎಲ್ ಕಾರ್ಡ್ ಕೂಡಾ ರದ್ದುಗೊಳಿಸಲಾಗಿದೆ. ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೀನುಗಾರರ ರಕ್ಷಣೆಗೆ ಅಗತ್ಯವಿರುವ ಸೀ ಆಂಬುಲೆನ್ಸ್ ಕೊಟ್ಟಿಲ್ಲ, ಡ್ರೆಜ್ಜಿಂಗ್ ಮಿಷನ್ ಕೂಡಾ ಇಲ್ಲ, ಮೀನುಗಾರಿಕಾ ಜಟ್ಟಿ, ಕ್ರೂಸ್, ಫ್ಲೋಟಿಂಗ್ ಜಟ್ಟಿ ಯಾವುದೂ ಸಾಕಾರಗೊಂಡಿಲ್ಲ. ಬಂದರುಗಳ ಲ್ಯಾಂಡ್ ರೆಂಟ್ ದರಗಳ ಹೆಚ್ಚಳದಿಂದಾಗಿ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ ಎಂದರು.

ಮಂಗಳೂರು ಆಯುಷ್‌ನಲ್ಲಿ ಔಷಧ ಅಕ್ರಮ, ಅಬಕಾರಿ ಹಗರಣ, ವಾಲ್ಮೀಕಿ ನಿಗಮ, ಮೂಡಾ ಹಗರಣ, ಕಾರ್ಮಿಕ ಇಲಾಖೆಯ ಕಿಟ್ ಹಗರಣ, ಕಸ ಗುಡಿಸುವ ಯಂತ್ರಗಳ ಹಗರಣ, ಎಲ್ಲ ಇಲಾಖೆಗಳ ವರ್ಗಾವಣೆಯಲ್ಲಿ ಲಂಚಾವತಾರ, ಎಸ್ ಸಿ/ಎಸ್ ಟಿ, ವರ್ಗದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿಗೆ ಬಳಸಿಕೊಂಡಿದ್ದಲ್ಲದೆ, ನಾರಾಯಣ ಗುರು, ಬಂಟ ನಿಗಮಗಳಿಗೆ ಅನುದಾನ ನೀಡದೇ ಹಿಂದುಳಿದ ವರ್ಗಗಳಿಗೂ ಅನ್ಯಾಯ ಮಾಡಿದೆ. ಇಂತಹ ಸರ್ಕಾರ ಯಾವ ಮುಖ ಇಟ್ಟುಕೊಂಡು ನಮ್ಮದು ಉತ್ತಮ ಆಡಳಿತ ಎಂದು ರಾಜ್ಯಪಾಲರಿಂದ ಹೇಳಿಸುತ್ತದೆ ಎಂದು ಅವರು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ