ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕೊಡೆ ವಿತರಣೆ ಬಿಸಿಲಿಗೊಂದು ನೆರಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಶಾಲನಗರ: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕೊಡೆ ವಿತರಣೆ ಬಿಸಿಲಿಗೊಂದು ನೆರಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಂಘದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಅವರು ಸಾಂಕೇತಿಕವಾಗಿ ಕೊಡೆ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗಿಡ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಉತ್ತಮ ಪರಿಸರದ ನಿರ್ಮಾಣ ಆಗಬೇಕಿದೆ ಎಂದರು.
ಸಂಘದ ಅಧ್ಯಕ್ಷ ಬಿ.ಅಮೃತ್ ರಾಜ್ ಮಾತನಾಡಿ, ಸಂಘದ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಸದಸ್ಯರ ಕೊಡುಗೆ ಹಿನ್ನೆಲೆಯಲ್ಲಿ ಇಂದು ನಮ್ಮ ಸಂಸ್ಥೆ ಸಂಘದ ಮೂಲಕ ಜನಸಾಮಾನ್ಯರಿಗೆ ನೆರವು ನೀಡುವ ಮಟ್ಟಕ್ಕೆ ಶಕ್ತಿ ಲಭಿಸಿದೆ ಎಂದರು.
ಸಲಹಾ ಸಮಿತಿ ಸದಸ್ಯ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ರಜತ ಮಹೋತ್ಸವ ಹಿನ್ನೆಲೆಯಲ್ಲಿ 25 ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಸಂಘ ಚಿಂತನೆ ಹರಿಸಿದೆ. ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಫಲಾನುಭವಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದರು.
ಸಂಘದ ನಿರ್ದೇಶಕಿ ಚಿತ್ರ ಪಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಉಪಾಧ್ಯಕ್ಷ ಮಂಜುನಾಥ್ ಪಿ.ಆರ್, ಸಲಹಾ ಸಮಿತಿ ಸದಸ್ಯರಾದ ವಾಣಿಶ್ರೀ, ಬಾಲಾಜಿ ಸೇರಿದಂತೆ ಸಂಘದ ನಿರ್ದೇಶಕರಾದ ನಟರಾಜ್ ಬಿ.ಆರ್, ವೈಶಾಖ್ ವಿ, ಶ್ರೀನಿವಾಸ್ ವಿ.ಆರ್, ಬಾಬು ಎನ್.ವಿ, ಗೌತಮ್ ಎಸ್.ಎಸ್, ಆದರ್ಶ್ ಎಸ್, ಅಂಜನ್ ಬಿ.ಎನ್, ಋತ್ವಿಕ್ ಎಸ್.ಎಸ್, ಲತಾ ರಮೇಶ್, ನಾಮನಿರ್ದೇಶಿತ ನಿರ್ದೇಶಕರಾದ ದೀಪ್ತಿ ಎಸ್.ವಿ, ಸುಂದರ್ ಪಿ.ಎಸ್.ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.