ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ

KannadaprabhaNewsNetwork |  
Published : Jan 29, 2026, 01:30 AM IST
ಮಂಜುನಾಥ್‌ | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ನಿಮಗೆಲ್ಲಾ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಡುವ ನಿಟ್ಟಿನಲ್ಲಿ ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ನಿಮಗೆಲ್ಲಾ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಡುವ ನಿಟ್ಟಿನಲ್ಲಿ ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಡೆಮುನೇಶ್ವರ, ಹಾಗೂ ರಾಜ ಮುನೇಶ್ವರ ದೇವಸ್ಥಾನದ ಕುಂಭಾಭಿಷೇಕ ಹಾಗೂ ಉದ್ಘಾಟನೆ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರವು ಭೌಗೋಳಿಕವಾಗಿ ವಿಸ್ತೀರ್ಣವಾಗಿದ್ದು ಮತದಾರರು ನನಗೆ ನೀಡಿರುವ ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಈ ಭಾಗದಲ್ಲಿ ಜನರ ಋಣ ತೀರಿಸಲು ಶ್ರಮಿಸುತ್ತಿದ್ದೇನೆ. ಈ ದಿನ ಕೆ‌ ಶಿವರಾಂ ಅವರನ್ನು ನೆನೆಯುತ್ತಿದ್ದು ಅವರು ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೊಡಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದರು.

ಉರಿಲಿಂಗ ಪೆದ್ದ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ, ಮಲೆ ಮಹದೇಶ್ವರ ಕ್ಷೇತ್ರ ಧಾರ್ಮಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲರನ್ನು ಒಟ್ಟಿಗೂಡಿಸುವಂತಹ ಕ್ಷೇತ್ರ. ಪ್ರತಾಪ್ರಭುತ್ವದ ಆಶಯಗಳನ್ನು ಜಾರಿ ಮಾಡುವಂತಹ ಕ್ಷೇತ್ರ. ಈ ನೆಲೆಯಲ್ಲಿ ಜಡೆ ಮುನೇಶ್ವರ ದೇವಾಲಯದ ನಿರ್ಮಾಣ ಮಾಡಿರೋದು ಎಲ್ಲರೂ ಸಹೋದರತ್ವದಿಂದ ಬಾಳಲಿ ಎಂಬ ಉದ್ದೇಶವನ್ನಿಟ್ಟುಕೊಂಡು ಮಾಡಿದ್ದಾರೆ. ಸಂವಿಧಾನದ ಆಶಯಗಳನ್ನು ಜಾರಿಗೆ ಮಾಡುವ ಮನಸ್ಸನ್ನು ಮಲೆ ಮಾದೇಶ್ವರರು ಅಂದೆ ಮಾಡಿದ್ದರು ಎಂದರು.

ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ, ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಛಲವಾದಿ ಮಹಾ ಸಭಾದ ರಾಜ್ಯಧ್ಯಕ್ಷ ವಾಣಿ ಶಿವರಾಮ್, ಸಂಸ್ಥಾನ ಮಠದ ಬಸವನಾಗಿ ದೇವಾ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ರಘು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ನಿಶಾಂತ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದತ್ತೆಶ್ ಕುಮಾರ್, ದೀಪಕ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಂಜೇಶ್ ಗೌಡ, ಛಲವಾದಿ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಅರ್ಚನಾ, ಡಿ ಕೆ ರಾಜು, ವಿಜಯ್ ಕುಮಾರ್, ಶಿವರಾಮು, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ದಿನದಲ್ಲಿ 37 ಜನರಿಗೆ ನಾಯಿ ಕಡಿತ, ಬಾಲಕಿ ಗಂಭೀರ - 4 ನಗರಗಳಲ್ಲಿ ಬೀದಿ ನಾಯಿ, ಹುಚ್ಚು ನಾಯಿ ಕಡಿತ
ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!