ಶಿಕ್ಷಕರ ಸಮಸ್ಯೆಗೆ ಪರಿಹಾರಕ್ಕೆ ಪ್ರಾಮಾಣಿಕ ಶ್ರಮ

KannadaprabhaNewsNetwork | Published : Dec 15, 2023 1:30 AM

ಸಾರಾಂಶ

ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ವರ್ಗಾವಣೆ ಸಮಸ್ಯೆ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ನಡುವೆ ಇರುವ ವೇತನ ತಾರತಮ್ಯ ಹೋಗಲಾಡಿಸಲು ಪ್ರಾಮಾಣಿಕ ವಾಗಿ ಶ್ರಮಿಸಲಾಗುವುದು ಎಂದು ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗುರುವಾರ ಭೇಟಿ ನೀಡಿ, ಮತಯಾಚನೆ ಮಾಡಿದರು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಹಾಕುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.

ಹೊಸದುರ್ಗದಲ್ಲಿ ಮತಯಾಚಿಸಿ ಡಿ.ಟಿ.ಶ್ರೀನಿವಾಸ್ ಭರವಸೆಕನ್ನಡಪ್ರಭ ವಾರ್ತೆ ಹೊಸದುರ್ಗ

ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ವರ್ಗಾವಣೆ ಸಮಸ್ಯೆ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ನಡುವೆ ಇರುವ ವೇತನ ತಾರತಮ್ಯ ಹೋಗಲಾಡಿಸಲು ಪ್ರಾಮಾಣಿಕ ವಾಗಿ ಶ್ರಮಿಸಲಾಗುವುದು ಎಂದು ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗುರುವಾರ ಭೇಟಿ ನೀಡಿ, ಮತಯಾಚನೆ ಮಾಡಿದರು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಹಾಕುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಕ್ಷೇತ್ರದಲ್ಲಿ ಸಮಸ್ಯೆಗಳು ಬಗೆಹರಿಯದೆ ಹಾಗೆ ಉಳಿದಿದೆ. ಕಳೆದ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿ ಪೂರ್ಣಿಮಾ ಅವರಿಗೆ ಸಿಕ್ಕ ಅವಕಾಶ ವನ್ನು ಬಳಸಿಕೊಂಡು ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ಪ್ರತಿ ಹಳ್ಳಿಯಲ್ಲಿಯೂ ಅಭಿವೃದ್ಧಿ ಮಾಡಿದ್ದೇವೆ. ನಮ್ಮ ನಡೆ, ನುಡಿ ನೀವೆಲ್ಲರೂ ನೋಡಿದ್ದೀರಾ. ನೀವು ಕೊಟ್ಟ ಅವಕಾಶವನ್ನು ನಿಮ್ಮ ಸೇವೆಗೆ ಮೀಸಲೀಡಲಾಗುವುದು ಎಂದರು .

ರಾಜ್ಯದಲ್ಲಿ 102 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೇ.78 ಕಾಲೇಜುಗಳಲ್ಲಿ ಹುದ್ದೆಗಳು ಖಾಲಿ ಇವೆ. ಹಾಗೆಯೇ ಪಿಯು ಕಾಲೇಜುಗಳಲ್ಲಿ ಹುದ್ದೆಗಳ ಭರ್ತಿ ಆಗಿಲ್ಲ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲು, ಹಾಗೆಯೇ ಏಳನೇ ವೇತನ ಆಯೋಗ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಹುದ್ದೆಗಳ ನೇಮಕಾತಿಗೆ ಅವಕಾಶ ನೀಡಿಲ್ಲ. ಅದನ್ನು ಸರಿಪಡಿಸುವುದರ ಜೊತೆಗೆ ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಜೊತೆ ಈಗಾಗಲೇ ಚರ್ಚಿಸಿದ್ದು, ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದರು.

ನಿವೃತ್ತ ಪಾರ್ಮಸಿಸ್ಟ್ ಎಂ.ಆರ್.ಸಿ ಮೂರ್ತಿ, ಯುವಜನ ಸೇವಾ ಕ್ರೀಡಾಧಿಕಾರಿ ವಿ.ಮಹಾಂತೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗುತ್ತಿಗಟ್ಟೆ ಪ್ರಕಾಶ್, ತಿಮ್ಮಣ್ಣ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಯ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ಕಾಂತರಾಜ್, ಸುರೇಶ್, ಜಯಣ್ಣ ಮತ್ತಿತರಿದ್ದರು.

Share this article