ಬಳ್ಳಾರಿ: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ನಾಡಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಕಪಾಳಮೋಕ್ಷ ಮಾಡಿದ್ದಾರೆ. ಈ ಫಲಿತಾಂಶದಿಂದಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ನಾಡಿನ ಅಭಿವೃದ್ಧಿ ಹಾಗೂ ಜನಕಲ್ಯಾಣದ ಕಡೆ ಗಮನ ಹರಿಸಬೇಕು ಎಂದು ವಿಪ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು.
ಸಿದ್ದು ವಿರುದ್ಧ ಡಿಕೆ ಸ್ಟಿಂಗ್: ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್, ರಿಂಗ್ ಬಗ್ಗೆ ಏನೂ ಗೊತ್ತಿಲ್ಲ. ಈ ವಿಷಯ ತನಿಖೆ ನಡೆಯುತ್ತಿದೆ. ಸತ್ಯ ಹೊರ ಬರಲಿ ಎಂದರು.
ಸಿದ್ಧರಾಮಯ್ಯ ಹಿಂದುಳಿದ ವರ್ಗಗಳ ಬಹುದೊಡ್ಡ ನಾಯಕ. ಸಿದ್ಧರಾಮಯ್ಯಗೆ ಈ ರೀತಿಯಲ್ಲಿ ಮಾಡಿಯೇ ಖುರ್ಚಿಯಿಂದ ಕೆಳಗೆ ಇಳಿಸಿದರು ಡಿ.ಕೆ.ಶಿವಕುಮಾರ್ ಎಂದು ಆರೋಪಿಸಿದರು. ಮಾನ, ಮರ್ಯಾದೆ ಇದ್ದವರು ಈ ರೀತಿ ಮಾಡಬಾರದು. ಸಿದ್ಧರಾಮಯ್ಯನವರಿಗೆ ಈ ರೀತಿ ಅಪಮಾನ ಮಾಡುತ್ತಾ ಹೋದರೆ ಕಾಂಗ್ರೆಸ್ ಹೇಳಲು ಹೆಸರಿಲ್ಲದಂತಾಗುತ್ತದೆ ಎಂದು ತಿಳಿಸಿದರು.ತಂದೆಗೆ ತಕ್ಕ ಮಗ ಮೋದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರವಿಕುಮಾರ್, ಮೋದಿ ಅವರ ತಂದೆಯ ಬಗ್ಗೆ ಮಾತನಾಡುವ ಮೂಲಕ ಖರ್ಗೆ ಅವರು ತಮ್ಮ ರಾಜಕೀಯ ಹತಾಶೆ ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದರು.
ನ.2ರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ಪಾದಯಾತ್ರೆ
ಚುನಾವಣೆಗಳಲ್ಲಿ ನಿರಂತರ ಸೋಲು ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕರು ಹತಾಶೆಯಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಜನವಿರೋಧಿ ಧೋರಣೆ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.