ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಕೆ.ಇ.ಬಿ. ಸರ್ಕಲ್‌ನಲ್ಲಿರುವ ನೂತನ ಸರ್ಕಾರಿ ನೌಕರರ ಸಭಾ ಭವನದಲ್ಲಿ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಶೂನ್ಯ ಬಂಡವಾಳದಲ್ಲಿ ಸಹಕಾರಿ ಸಂಘವನ್ನು ಆರಂಭಿಸಿದಾಗ ಅಂದು ನಮ್ಮ ಮೇಲೆ ಅಪಾರ ನಂಬಿನಿಕೆಯನ್ನಿಟ್ಟು 5 ಕೋಟಿ ರು. ಸಾಲ ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರ ಸಹಕಾರ, ಬೆಂಬಲವನ್ನು ನಾವ್ಯಾರೂ ಎಂದಿಗೂ ಮರೆಯುವಂತಿಲ್ಲ ಎಂದರು.
ಅಲ್ಲದೇ ಗೃಹ ನಿರ್ಮಾಣ ಸಹಕಾರಿ ಸಂಘದ ಮೂಲಕ ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಕಡಿಮೆ ಅವಧಿಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿರುವ ಸಂಘವೆಂದರೆ ನಮ್ಮ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘ ಎಂದು ಹೆಮ್ಮೆ ಎನಿಸುತ್ತಿದೆ ಎಂದು ತಿಳಿಸಿದರು.ಷಡಾಕ್ಷರಿ ಪಾತ್ರ ಹಿರಿದು:
ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಸರ್ಕಾರಿ ನೌಕರರ ಸಂಘ, ನೌಕರರ ಸಹಕಾರಿ ಸಂಘ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘಗಳು ಸಿ.ಎಸ್. ಷಡಾಕ್ಷರಿ ಅವರು ಹಾಗೂ ಆರ್.ಮೋಹನ್ ಕುಮಾರ್ ಮುಂದಾಳ ತ್ವದಲ್ಲಿ ಅತ್ಯಂತ ಮುನ್ನಡೆಯುತ್ತಿವೆ. ಅವರ ಬದ್ಧತೆ ಹಾಗೂ ನಿಸ್ವಾರ್ಥ ಸೇವಾ ಮನೋಭಾವ ಕಾರಣ ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಕ್ಯಾಷ್ ಲೆಸ್ ಯೋಜನೆಯಡಿ ಸರ್ಕಾರಿ ನೌಕರರಿಗೆ ನಿಯಮಾ ನುಸಾರವಾಗಿ ಚಿಕಿತ್ಸೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಂದು ದೂರದೃಷ್ಟಿತ್ವದೊಂದಿಗೆ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವನ್ನು ಹುಟ್ಟುಹಾಕಿದ್ದರು. 2014 ರಲ್ಲಿ ಆರಂಭವಾದ ಸಹಕಾರಿಯು ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿದೆ. ಇಂದು ದುಡಿಯುವ ಬಂಡವಾಳ 31 ಕೋಟಿ ರು. ಇದ್ದು, ವಾರ್ಷಿಕ 1.70 ಕೋಟಿ ರು. ನಿವ್ವಳ ಲಾಭದಲ್ಲಿದೆ. ಸರಳ ಬಡ್ಡಿಯೊಂದಿಗೆ ಎಲ್ಲ ನೌಕರ ಸದಸ್ಯರಿಗೂ ಕೈಗೆಟುವ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಆರ್. ಮೋಹನ್ ತಿಳಿಸಿದರು.
-----------------------
ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕರು ಹಾಗೂ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.ಸಭೆಯಲ್ಲಿ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳು, ಸದಸ್ಯರ ಹಿತಾಸಕ್ತಿ, ಸಂಘದ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿ ಸಲಾಯಿತು.ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಭವಿಷ್ಯದ ಶೈಕ್ಷಣಿಕ ಪಯಣಕ್ಕೆ ಶುಭ ಹಾರೈಸಲಾಯಿತು. ಸದಸ್ಯರ ಹಿತಾಸಕ್ತಿ, ಸಂಘದ ಅಭಿವೃದ್ಧಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕೆ ಆದ್ಯತೆ ನೀಡುವ ಮೂಲಕ ಸಹಕಾರದ ಆಶಯಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಪೊಟೋ: 21ಎಸ್‌ಎಂಜಿಕೆಪಿ07
ಶಿವಮೊಗ್ಗ ನಗರದ ಕೆ.ಇ.ಬಿ. ಸರ್ಕಲ್‌ನಲ್ಲಿರುವ ನೂತನ ಸರ್ಕಾರಿ ನೌಕರರ ಸಭಾ ಭವನದಲ್ಲಿ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.