ಜಾತಿರಹಿತ ಸಮಾಜ, ದುಡಿಮೆ ಮಹತ್ವ ಸಾರಿದ ಬಸವಣ್ಣ: ಶಾಸಕ ಎನ್‌. ಶ್ರೀನಿವಾಸ್

KannadaprabhaNewsNetwork |  
Published : Apr 21, 2026, 01:30 AM IST
ಪೊಟೊ-20ಕೆಎನ್‌ಎಲ್‌ಎಮ್‌1-ನೆಲಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ   ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆಶಾಸಕ ಎನ್‌ ಶ್ರೀನಿವಾಸಯ್ಯ ಪುಷ್ಪನಮನ  ಅರ್ಪಿಸಿದರು.ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲೇಶ್‌ ಬಿ ಪೂಜಪ್ಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ಎಸ್‌ ನಟರಾಜು , ಗ್ರಾಮಾಂತರ ಜಿಲ್ಲಾಧ್ಯಕ್ಷ ರೇವಣ್ಣಸಿದ್ದಯ್ಯತಾಲೂಕು ಅದ್ಯಕ್ಷ ರಾಜಶೇಖರ್ ಇದ್ದರು. | Kannada Prabha

ಸಾರಾಂಶ

ವಿಶ್ವಗುರು ಬಸವಣ್ಣನವರು ಸಮಾಜದಲ್ಲಿದ್ದ ಮೂಢನಂಬಿಕೆ ಮತ್ತು ಅಸಮಾನತೆ ಹೋಗಲಾಡಿಸಲು ''''ಅನುಭವ ಮಂಟಪ''''ದ ಮೂಲಕ ವಚನ ಸಾಹಿತ್ಯಕ್ಕೆ ಭದ್ರಬುನಾದಿ ಹಾಕಿದರು.

ಕನ್ನಡಪ್ರಭವಾರ್ತೆ ನೆಲಮಂಗಲ

ಬಸವಣ್ಣ ''''''''ಕಾಯಕವೇ ಕೈಲಾಸ'''''''' ಎಂಬ ಮಂತ್ರದ ಮೂಲಕ ದುಡಿಮೆ ಮಹತ್ವ, ಜಾತಿರಹಿತ ಸಮಾಜ ಮತ್ತು ಲಿಂಗ ಸಮಾನತೆಯನ್ನು ಪ್ರತಿಪಾದಿಸಿದರು. 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾ೦ತಿಗೆ ಕಾರಣಾರಾದ ಮಹಾನ್ ವ್ಯಕ್ತಿಗಳಲ್ಲಿ ಜಗಜ್ಯೊತಿ ಬಸವಣ್ಣನವರು ಒಬ್ಬರು ಎಂದು ಶಾಸಕ ಎನ್‌. ಶ್ರೀನಿವಾಸಯ್ಯ ನುಡಿದರು.

ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಮಾತನಾಡಿದ ಅವರು, ವಿಶ್ವಗುರು ಬಸವಣ್ಣನವರು ಸಮಾಜದಲ್ಲಿದ್ದ ಮೂಢನಂಬಿಕೆ ಮತ್ತು ಅಸಮಾನತೆ ಹೋಗಲಾಡಿಸಲು ''''''''ಅನುಭವ ಮಂಟಪ''''''''ದ ಮೂಲಕ ವಚನ ಸಾಹಿತ್ಯಕ್ಕೆ ಭದ್ರಬುನಾದಿ ಹಾಕಿದರು. ತಾಲೂಕಿನ ವೀರಶೈವ ಲಿಂಗಾಯತ ಸಮಾಜ ಬಾಂಧವರ ಸಮುದಾಯ ಭವನಕ್ಕಾಗಿ ತಾಲೂಕಿನ ಯಲಚಗೆರೆ ಗ್ರಾಮದಲ್ಲಿ ಒಂದೂವರೆ ಎಕರೆ ಜಮೀನು ನೀಡಲು ಸರ್ಕಾರದಲ್ಲಿ ಕಡತ ಅನುಮೋದನೆಗೆ ಸಿದ್ಧಗೊಂಡಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಮಲ್ಲೇಶ್‌ ಬಿ. ಪೂಜಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ಎಸ್‌. ನಟರಾಜು, ಗ್ರಾಮಾಂತರ ಜಿಲ್ಲಾಧ್ಯಕ್ಷ ರೇವಣ್ಣಸಿದ್ದಯ್ಯ, ತಾಲೂಕು ಅಧ್ಯಕ್ಷ ರಾಜಶೇಖರ್, ರಾಜ್ಯ ಮಹಿಳಾ ಕಾರ್ಯದರ್ಶಿ ರಾಜಮ್ಮ ಪ್ರಕಾಶ್, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತಕುಮಾರ್, ತಾಲೂಕು ಮಹಿಳಾ ಘಟಕ ಅದ್ಯಕ್ಷೆ ವೇದಾವತಿ, ರಾಜ್ಯ ಯುವ ಘಟಕದ ಮಾಜಿ ಸದಸ್ಯ ಕೊಟ್ರೇಶ್, ಜಿಲ್ಲಾ ನಿರ್ದೇಶಕರಾದ ಬೃಂಗೇಶ್, ಮಂಜುಳ ಸುರೇಶ್, ನಗರಸಭೆ ಮಾಜಿ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು, ಸದಸ್ಯ ಸಿ.ಪ್ರದೀಪ್, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎನ್‌. ಎಸ್‌. ಗಣೇಶ್‌, ಟೌನ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎನ್‌. ಚನ್ನಬಸವರಾಜು, ಕವಾಡಿ ಮಠ ಅಧ್ಯಕ್ಷ ಎನ್.ಆರ್‌. ಜಗದೀಶ್‌, ರುದ್ರೇಶ್ವರ ಸೊಸೈಟಿ ಅಧ್ಯಕ್ಷ ಬಿ. ದಯಾಶಂಕರ್, ತಾಲೂಕು ಕಚೇರಿ ಕಂದಾಯ ನಿರೀಕ್ಷಕರಾದ ಚಂದ್ರಶೇಖರ್‌, ಶಿವಪ್ರಸಾದ್‌ ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವಣ್ಣನವರ ವಚನಗಳು ವಿಶ್ವದ ಸಮಸ್ಯೆಗಳಿಗೆ ಪರಿಹಾರ: ಡಾ.ಕುಮಾರ
ಬಸವಣ್ಣನವರ ತತ್ವಗಳು ಸಮಾನತೆಗೆ ದಾರಿದೀಪ