ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಶೇಷ ಪೂಜೆ

KannadaprabhaNewsNetwork | Published : Jan 21, 2024 1:30 AM

ಸಾರಾಂಶ

ಮಾಗಡಿ: ಪಟ್ಟಣದ ಏಳು ಕುದುರೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಸೇವಕ ಕಲ್ಯಾಣ್ ಕುಮಾರ್ ತಿಳಿಸಿದರು.

ಮಾಗಡಿ: ಪಟ್ಟಣದ ಏಳು ಕುದುರೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಸೇವಕ ಕಲ್ಯಾಣ್ ಕುಮಾರ್ ತಿಳಿಸಿದರು.

ದೇವಸ್ಥಾನದ ಆವರಣದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದ ಭಾವಚಿತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಹಿಂದುಗಳಿಗೆ ದೊಡ್ಡ ಹಬ್ಬವಾಗಿ ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಆಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ರಾಮಮಂದಿರ ನಿರ್ಮಾಣದ ಹಿಂದೆ ಶ್ರಮಿಸಿದ ಎಲ್ಲಾ ಕರ ಸೇವಕರಿಗೂ ಧನ್ಯವಾದ ತಿಳಿಸುತ್ತೇವೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ಅಭಿಷೇಕ ಬೆಣ್ಣೆಯ ಅಲಂಕಾರ, ವಿಶೇಷ ಹೂವಿನ ಅಲಂಕಾರ ದೇವಸ್ಥಾನದ ಮುಂಭಾಗದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಭಾವಚಿತ್ರ, ದೇವಸ್ಥಾನದ ಸುತ್ತಲೂ ವಿದ್ಯುತ್ ಅಲಂಕಾರ ಏರ್ಪಡಿಸಲಾಗಿದೆ ಎಂದರು.

ಸೋಮವಾರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲಾ ಭಕ್ತರಿಗೂ ಅನ್ನ ಸಂತರ್ಪಣೆ 2,500ಕ್ಕೂ ಹೆಚ್ಚು ಲಾಡು, ಪಾನಕ, ಮಜ್ಜಿಗೆ ವಿತರಣೆ ಮಾಡಲಾಗುತ್ತದೆ. ವಿಶೇಷ ಪೂಜಾ ಕೈಂಕರ್ಯದಲ್ಲಿ ಮಹಿಳಾ ಮಂಡಳಿ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸುತ್ತಿದ್ದು ಶ್ರೀರಾಮನ ಸ್ಮರಣೆಯನ್ನು ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಪೂಜೆ ಮಾಡುವ ಮೂಲಕ ದೀಪ ಹಚ್ಚಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯನ್ನು ಎಲ್ಲರೂ ಕಣ್ತುಂಬಿಕೊಳ್ಳಬೇಕು. ಜೊತೆಗೆ ದೇವಸ್ಥಾನದ ಮುಂಭಾಗದಲ್ಲಿ ಎಲ್ಇಡಿ ಪರದೆ ಮೂಲಕ ನೇರ ಪ್ರಸಾರವನ್ನು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಮುಖಂಡರಾದ ಬಾಬು, ನರಸಿಂಹಣ್ಣ, ಯೋಗಿ, ನಾಗೇಂದ್ರ, ಅರಣ್ ಕುಮಾರ್, ಯಶಸ್‌, ವೆಂಕಟಾದ್ರಿ ಭಜನಾ ಮಂಡಳಿ ಸದಸ್ಯರಾದ ಆದಿಲಕ್ಷ್ಮಿ ಮಹೇಶ್, ಜ್ಯೋತಿ ಕೃಷ್ಣಪ್ಪ, ಉಮಾ, ಅನು, ಸುಜಾತ, ಕೃಷ್ಣಮೂರ್ತಿ, ವಿಶ್ವನಾಥ್, ಗೋಪಾಲ್, ಗಂಗಲಕ್ಷ್ಮೀ ಸೇರಿದಂತೆ ಇತರರು ಭಾಗವಹಿಸಿದ್ದರು.ಪೋಟೋ 20ಮಾಗಡಿ1:

ಮಾಗಡಿ ಪಟ್ಟಣದ ಏಳು ಕುದುರೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಭಾವಚಿತ್ರ ಬಿಡುಗಡೆ ಮಾಡಲಾಯಿತು.

Share this article