ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿ.ಎ.ಆರ್. ಕೇಂದ್ರ ಸ್ಥಾನದಲ್ಲಿರುವ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ ಪ್ರತಿಷ್ಠಿತ 28ನೇ ವರ್ಷದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -2026 ಅನ್ನು ಉದ್ಘಾಟಿಸಿ ಮಾತನಾಡಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ದೈಹಿಕ ಸಾಮರ್ಥ್ಯ ಅತ್ಯಂತ ಮುಖ್ಯ. ಪೊಲೀಸ್ ಇಲಾಖೆಯ ಗೌರವ ಉಳಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿ. ತುಂಬಾ ಶಿಸ್ತುಬದ್ಧವಾಗಿ ಕ್ರೀಡಾಕೂಟ ನಡೆಯುತ್ತಿದೆ. ಕ್ರೀಡಾಕೂಟ ಯಶಸ್ವಿಯಾಗಲಿ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಎಂ. ಮಾತನಾಡಿ, ಜಿಲ್ಲೆಯ ಪೊಲೀಸ್ ಕುಟುಂಬ ಒಂದೇ ವೇದಿಕೆಯಲ್ಲಿ ಸೇರಿರುವುದು ಹೆಮ್ಮೆಯ ವಿಷಯ. ಕ್ರೀಡಾಕೂಟ ಯಶಸ್ವಿಯಾಗಲಿ, ಎಲ್ಲಾ ತಂಡಗಳು ಶಿಸ್ತುಬದ್ಧವಾಗಿ, ಪ್ರಾಮಾಣಿಕವಾಗಿ ಸ್ಪರ್ಧಿಸಲಿ. ಈ ಕ್ರೀಡಾಕೂಟ ನಮ್ಮ ಸಿಬ್ಬಂದಿಯ ಆತ್ಮವಿಶ್ವಾಸ, ಆರೋಗ್ಯ ಮತ್ತು ಒಗ್ಗಟ್ಟನ್ನು ಹೆಚ್ಚಿಸಲಿದೆ ಎಂದು ಹೇಳಿದರು.
ನಂತರ ಎಲ್ಲಾ ಕ್ರೀಡಾಪಟುಗಳು ಒಟ್ಟಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅಪರ ಪೊಲೀಸ್ ಅಧೀಕ್ಷಕ ಎಂ.ಎನ್. ಶಶಿಧರ ವಂದನಾರ್ಪಣೆ ಮಾಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ್ದ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಕ್ರೀಡಾಪಟುಗಳ ಉಪಸ್ಥಿತಿಯಲ್ಲಿ ಕವಾಯತು ಮೈದಾನ ಕ್ರೀಡಾಮಯವಾಗಿತ್ತು. ಬೆಳಿಗ್ಗೆಯಿಂದಲೇ ಮೈದಾನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿಗಳಾದ ಸ್ನೇಹರಾಜ್, ಮೋಹನ್, ಸೋಮಣ್ಣ,ಆರ್‌ಪಿಐ ಸತೀಶ್ , ಸಾಗರ್, ಶೇಷಾದ್ರಿ ಸೇರಿದಂತೆ ಜಿಲ್ಲೆಯ ಎಲ್ಲಾ ಠಾಣೆಗಳ ಸಬ್ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿ ವರ್ಗ, ಕುಟುಂಬಸ್ಥರು, ಸಾರ್ವಜನಿಕರು ಇತರರು ಹಾಜರಿದ್ದರು.