ರಾಮನಗರ: ಕ್ಷಯ ರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಪ್ರಶಂಶಿಸಿ ರೇಷ್ಮೆನಾಡಿಗೆ ಕಂಚಿನ ಪದಕ ಲಭಿಸುವಂತೆ ಕಾರ್ಯನಿರ್ವಹಿಸಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಇದೀಗ 2025ರ ವೇಳೆಗೆ ಕ್ಷಯ ಮುಕ್ತ ರಾಮನಗರ ಜಿಲ್ಲೆಯನ್ನಾಗಿಸುವತ್ತ ದಾಪುಗಾಲು ಇಟ್ಟಿದೆ.
ರಾಮನಗರ ಜಿಲ್ಲೆಯು 2015ಕ್ಕೆ ಹೋಲಿಸಿದರೆ 2023ರಲ್ಲಿ ಕ್ಷಯ ರೋಗದ ಪ್ರಕರಣಗಳು ಶೇ.20ರಷ್ಟು ಕಡಿಮೆಯಾದ್ದರಿಂದ ಕ್ಷಯರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಮೆಚ್ಚಿ ರಾಮನಗರ ಜಿಲ್ಲೆಗೆ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ನೀಡಿ ಗೌರವಿಸಲಾಗಿದೆ.ಈಗ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮಾತ್ರವಲ್ಲದೆ ಜನರಲ್ಲಿ ಅರಿವು ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯೋನ್ಮುಖವಾಗಿದೆ.
ಕ್ಷಯ ಮುಕ್ತ ಗ್ರಾಮ ಪಂಚಾಯಿತಿ:ಜಿಲ್ಲಾ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಸಹಕಾರದೊಂದಿಗೆ ಸಮುದಾಯದಲ್ಲಿ ಕ್ಷಯ ರೋಗದ ಬಗ್ಗೆ ಇರುವ ಭಯ, ಆತಂಕ, ನಿವಾರಣೆ ಮಾಡಲಾಗುತ್ತಿದೆ. ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿ ಕ್ಷಯರೋಗವನ್ನು ಸೊನ್ನೆಗೆ ತರುವ ಗುರಿ ಹೊಂದಿದ್ದು ಶಂಕಿತ ಪ್ರಕರಣಗಳ ಶೀಘ್ರ ಪತ್ತೆ ಮಾಡಿ ತ್ವರಿತ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಕ್ಷಯರೋಗ ಪ್ರಕರಣಗಳು ಹೆಚ್ಚಾಗಿ ವರದಿಯಾದ ಸ್ಥಳಗಳಲ್ಲಿ ಜಾನಪದ ಬೀದಿನಾಟಕ ಕಲಾತಂಡಗಳ ಪ್ರದರ್ಶನ, ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಬಹುವರ್ಣದ ಗೋಡೆ ಬರಹ ಮೂಲಕ ಅರಿವು ಮೂಡಿಸಲಾಗುತ್ತಿದೆ. ಆಯ್ದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ಷಯ ರೋಗದ ನಿಯಂತ್ರಣ ಕುರಿತು ಪ್ರಬಂಧಸ್ಪರ್ಧೆ ಮತ್ತು ರಸಪ್ರಶ್ನೆ, ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ಷಯರೋಗ ನಿರ್ಮೂಲನೆಗೆ ವಿದ್ಯಾರ್ಥಿಗಳನ್ನು ಜಾಗೃತರನ್ನಾಗಿ ಮಾಡಲಾಗುತ್ತಿದೆ.1142 ರೋಗಿಗಳಿಗೆ ಚಿಕಿತ್ಸೆ :
ನಿಕ್ಷಯ್ ಮಿತ್ರ ಕಾರ್ಯಕ್ರಮದಡಿ ಇಲಾಖಾ ಮತ್ತು ಇಲಾಖೇತರ ಅಧಿಕಾರಿಗಳು ವಿವಿಧ ಸಂಘ-ಸಂಸ್ಥೆಗಳು ಹಾಗೂ ಪ್ರತಿಷ್ಠಿತ ಕಂಪನಿಗಳ ಸಹಕಾರದಿಂದ ಪ್ರಸ್ತುತ ಚಿಕಿತ್ಸೆಯಲ್ಲಿರುವ 1142 ಕ್ಷಯರೋಗಿಗಳನ್ನು ದತ್ತು ಪಡೆದು ಚಿಕಿತ್ಸಾ ಅವಧಿಯವರೆಗೆ ಪೌಷ್ಟಿಕಾಂಶಯುಕ್ತ ಆಹಾರದ ಕಿಟ್ ಮತ್ತು ಪ್ರೊಟೀನ್ ಪೌಡರ್‌ಗಳನ್ನು ವಿತರಿಸಲಾಗುತ್ತಿದೆ.ಕಳೆದ 5 ವರ್ಷಗಳ ಅವಧಿಯಲ್ಲಿ 5553 ಕ್ಷಯ ರೋಗ ಪ್ರಕರಣಗಳು ಬೆಳಕಿಗೆ ಬಂದಿದೆ. ಇದರಲ್ಲಿ 4255 ಮಂದಿ ಗುಣಮುಖರಾಗಿದ್ದರೆ, 280 ಮಂದಿ ಧೀರ್ಘಾವದಿವರೆಗೆ ಚಿಕಿತ್ಸೆ ಪಡೆದಿದ್ದಾರೆ. 406 ಮಂದಿ ರೋಗ ಉಲ್ಬಣಿಸಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 2019 ಮತ್ತು 2023ನೇ ಸಾಲಿಗೆ ಹೋಲಿಕೆ ಮಾಡಿದಲ್ಲಿ ಕ್ಷಯ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದರೆ, ಶೇಕಡ 85 ರಿಂದ 90ರಷ್ಟು ಮಂದಿ ಗುಣ ಹೊಂದುತ್ತಿದ್ದಾರೆ. ಇನ್ನು 2021ರಲ್ಲಿ 91 ಮತ್ತು 2022ರಲ್ಲಿ 89 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೆ 75ರಂತೆ ಮರಣ ಪ್ರಮಾಣ ಇದೆ.ಕ್ಷಯ ರೋಗದ ಲಕ್ಷಣಗಳು ಏನು ? :
ಕ್ಷಯ ರೋಗ ಮೈಕೋ ಬ್ಯಾಕ್ಟೀರಿಯಾ ಟ್ಯುಬರ್ ಕ್ಯುಲೋಸಿಸ್ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗ. ಎರಡು ವಾರಕ್ಕಿಂತ ಹೆಚ್ಚಿನ ಅವಧಿಯ ಕೆಮ್ಮು, ರಾತ್ರಿ ವೇಳೆ ಜ್ವರ, ಬೆವರುವುದು, ಕಫ, ಕಫದಲ್ಲಿ ರಕ್ತ, ಎದೆ ನೋವು, ಹಸಿವಾಗದಿರು ವುದು, ತೂಕ ಇಳಿಕೆ ಕ್ಷಯರೋಗದ ಲಕ್ಷಣಗಳಾಗಿವೆ.ಕ್ಷಯರೋಗ ತ್ವರಿತ ಪತ್ತೆಗಾಗಿ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ವೈದ್ಯಕೀಯ ಕಾಲೇಜು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ NAAT ಯಂತ್ರಗಳಿಂದ ಟಿಬಿ ಪರೀಕ್ಷೆ ಮಾಡಲಾಗುತ್ತದೆ. ರೋಗ ಪತ್ತೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಸಂಪೂರ್ಣವಾಗಿ ರೋಗವನ್ನು ಗುಣಪಡಿಸ ಬಹುದಾಗಿದೆ. ಇದಕ್ಕೆ ನಾಗರಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎನ್ನುತ್ತಾರೆ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಅಧಿಕಾರಿಗಳು.
ಕೋಟ್ .........ರಾಮನಗರವನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಟಿಬಿ ಸೋಲಿಸಿ ದೇಶ ಗೆಲ್ಲಿಸಿ ಘೋಷವಾಕ್ಯದಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅದನ್ನು ಕಾರ್ಯಗತ ಮಾಡಲು ಮುಂದಾಗಿದ್ದೇವೆ. ಈಗ ನಿಕ್ಷಯ್ ಪೋಷಣ್ ಯೋಜನೆಯಡಿ ಪ್ರಸ್ತುತ ಚಿಕಿತ್ಸೆಯಲ್ಲಿರುವ ಎಲ್ಲಾ ಕ್ಷಯರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಲು ಸರ್ಕಾರದ ವತಿಯಿಂದ ಪ್ರತಿ ಮಾಹೆ 500 ರು.ಗಳನ್ನು ರೋಗಿಯ ಉಳಿತಾಯ ಖಾತೆಗೆ ಡಿಬಿಟಿ ಮುಖಾಂತರ ಸಂದಾಯ ಮಾಡಲಾಗುತ್ತಿದೆ.
-ಡಾ.ಕೆ.ಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ, ರಾಮನಗರಬಾಕ್ಸ್.............
ರಾಮನಗರ ಜಿಲ್ಲೆಯ ಕ್ಷಯ ರೋಗಿಗಳ ಅಂಕಿಅಂಶವರ್.
ಒಟ್ಟು ಕ್ಷಯರೋಗಿಗಳ.ಸಾಮಾನ್ಯ ಕ್ಷಯರೋಗಿಗಳ.
ಎಂಡಿಆರ್ ಕ್ಷಯರೋಗಿಗಳ.ಗುಣಮುಖರಾದವರ.
ಮರಣ ಹೊಂದಿದವರು201.118.
113.4.
97.75
202.103.
98.4.
85.76
202.108.
104.4.
88.91
202.110.
103.5.
92.202.114.
108.6.
62.75ಒಟ್ಟ.
555.528.
28.425.
40628ಕೆಆರ್ ಎಂಎನ್ 2.ಜೆಪಿಜಿ
ಡಾ.ಕೆ.ಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ, ರಾಮನಗರ.