ಕನ್ನಡಪ್ರಭ ವಾರ್ತೆ : ಸಹಕಾರಿ ವ್ಯವಸ್ಥೆಯು ದೇಶದ ಆರ್ಥಿಕ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ, ಸಹಕಾರಿ ಕ್ಷೇತ್ರ ಬಲಿಷ್ಟವಾದರೇ ಬಡವರು, ಮಧ್ಯಮ ವರ್ಗ, ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಆಸರೆಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಆದರ್ಶ ಸಹಕಾರಿ ಸಂಘವು ಕಳೆದ 39 ವರ್ಷಗಳಿಂದ ಯಶಸ್ವಿಯಾಗಿ ಜನಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ. ಹಿರಿಯರು ಹಾಕಿಕೊಟ್ಟಿರುವ ಭದ್ರ ಬುನಾದಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಸಂಘವು ಮುಂದಿನ ಪೀಳಿಗೆಗೂ ಆದರ್ಶ ಸಂಸ್ಥೆಯಾಗಿ ಬೆಳೆಯಲಿ ಎಂದು ಆಶಿಸಿದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹಾಗೂ ಉದ್ಯಮಿ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಕೃಷ್ಣಮೂರ್ತಿ ಆಚಾರ್ಯ, ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫಿಕ್ ಖಾನ್ ಸಾಹೇಬ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್, ವಿನಯ ಪ್ರಕಾಶ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಜಯನ್ ಮಲ್ಪೆ ವಂದಿಸಿದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.