ಶಿಕ್ಷಕನಿಗೆ ಪ್ರತಿನಿತ್ಯ ಓದುವ ಹಂಬಲ ಅತಿಮುಖ್ಯ: ಜೀವನ್ ದಾಸ್

KannadaprabhaNewsNetwork |  
Published : Oct 22, 2026, 02:45 AM IST
ಫೋಟೋ: ೧೯ಪಿಟಿಆರ್-ಗುರು ಅಭಿನಂದನೆ ವಿವೇಕಾನಂದ ಪದವಿ ಕಾಲೇಜಿನಲ್ಲಿ `ಗುರು ಅಭಿವಂದನೆ  ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಶಿಕ್ಷಕನಿಗೆ ಪ್ರತಿನಿತ್ಯ ಓದುವ ಹಂಬಲ ಅತಿಮುಖ್ಯ, ಉತ್ತಮ ಶಿಕ್ಷಕ ಹೆಚ್ಚಿನ ತಿಳುವಳಿಕೆ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿರುವ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಸಾಮರ್ಥ್ಯ ಆತನಲ್ಲಿರಬೇಕು. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬರಲಿರುವವರು ಆ ಹುದ್ದೆಯ ಬಗ್ಗೆ ಶ್ರದ್ಧೆ ಮತ್ತು ಗೌರವವನ್ನು ಹೊಂದಿರಬೇಕು ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಜೀವನ್ ದಾಸ್ ಹೇಳಿದರು.

ಪುತ್ತೂರು : ಶಿಕ್ಷಕನಿಗೆ ಪ್ರತಿನಿತ್ಯ ಓದುವ ಹಂಬಲ ಅತಿಮುಖ್ಯ, ಉತ್ತಮ ಶಿಕ್ಷಕ ಹೆಚ್ಚಿನ ತಿಳುವಳಿಕೆ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿರುವ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಸಾಮರ್ಥ್ಯ ಆತನಲ್ಲಿರಬೇಕು. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬರಲಿರುವವರು ಆ ಹುದ್ದೆಯ ಬಗ್ಗೆ ಶ್ರದ್ಧೆ ಮತ್ತು ಗೌರವವನ್ನು ಹೊಂದಿರಬೇಕು ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಜೀವನ್ ದಾಸ್ ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರು ಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರುಳಿಕೃಷ್ಣ ಕೆ. ಎನ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲದೆ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಜನತೆ ಉತ್ತಮ ವ್ಯಕ್ತಿಗಳ ಜೀವನಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು.

ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು. ಭವಿಷ್ ಘಟಕದ ಸಂಯೋಜಕ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ಎಂ . ಜಿ. ಸ್ವಾಗತಿಸಿದರು. ಭವಿಷ್ ಘಟಕದ ಸಹ ಸಂಯೋಜಕಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಕವಿತಾ ವಂದಿಸಿದರು. ವಿದ್ಯಾರ್ಥಿನಿಯರಾದ ದೀಪ್ತಿ ಪ್ರಭು ಆಶಯಗೀತೆ ಹಾಡಿದರು. ಕೆ. ಕೃತಿಕಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಾಪುರ; ವೈಭವದ ವೆಂಕಟೇಶ್ವರ ರಥೋತ್ಸವ
ಬೆಳಗಾವಿಯಲ್ಲಿ ಅದ್ಧೂರಿ ದಸರಾ ಮಹೋತ್ಸವ