ವಿದ್ಯಾರ್ಥಿಗಳಿಂದ ಮಾತ್ರ ಬಲಿಷ್ಠ ಭಾರತ ಸಾಧ್ಯ

KannadaprabhaNewsNetwork |  
Published : Dec 28, 2025, 04:15 AM IST
ಹೊನಗಾದಲ್ಲಿ ಫೀನಿಕ್ಸ್‌ ಪಬ್ಲಿಕ್‌ ಶಾಲೆಯಲ್ಲಿ ನಡೆದ 29ನೇ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಾಂಬೋರೇಟ್‌ ಕಾರ್ಯಕ್ರಮ ಉದ್ಘಾಟಿಸಿ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಮಕ್ಕಳು ಸಕ್ರಿಯವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್‌ ಸಹಾಯಕವಾಗುತ್ತದೆ. ಭಾರತ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದು ಪ್ರತಿಯೊಬ್ಬರು ಕನಸು. ಭಾರತ ದೇಶ ಬಲಿಷ್ಯವಾಗಲು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಕ್ಕಳು ಸಕ್ರಿಯವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್‌ ಸಹಾಯಕವಾಗುತ್ತದೆ. ಭಾರತ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದು ಪ್ರತಿಯೊಬ್ಬರು ಕನಸು. ಭಾರತ ದೇಶ ಬಲಿಷ್ಯವಾಗಲು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ ಹೇಳಿದರು.

ಹೊನಗಾ ಗ್ರಾಮದ ಫೀನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ 29ನೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ -2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸಮಯದ ಮೌಲ್ಯ ತಿಳಿದು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಬರುವ ದಿನಗಳಲ್ಲಿ ನಿಮ್ಮ ವ್ಯಕ್ತಿತ್ವ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಮಕ್ಕಳು ಉತ್ತಮ ಪ್ರಜೆಗಳಾಗಿ ಉನ್ನತ ಸ್ಥಾನ ಪಡೆದು ಸಮಾಜ ಸುಧಾರಣೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದು ಶಿಕ್ಷಕರ ಕೆಲಸ. ಅದರಂತೆ ಮಕ್ಕಳಿಗೆ ಶಿಸ್ತು ಕಲಿಸುವುದು ಸ್ಕೌಟ್ಸ್ ಮತ್ತು ಗೈಡ್ ಕೆಲಸ. ಸ್ಕೌಟ್ಸ್ ಜೀವನದಲ್ಲಿ ಉತ್ತಮ ಪಾಠ ಪರಿಸರ ಕಲಿಸಿಕೊಡುತ್ತದೆ. 5 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಯಾವುದೇ ಜಾತಿ ಧರ್ಮದ ಬೇಧಭಾವವಿಲ್ಲದೇ ಪಾಠ ಹೇಳಿಕೊಡಲಾಗುತ್ತದೆ. ಜಗಜ್ಯೋತಿ ಬಸವಣ್ಣನವರ ಕಾಯಕವೇ ಕೈಲಾಸ, ಎಲ್ಲರೂ ಸಮಾನರೆಂಬ ಪಾಠ ಇಲ್ಲಿ ಕಲಿಸಲಾಗುತ್ತದೆ. ಎಲ್ಲಾ ಮಕ್ಕಳು ದೇಶಪ್ರೇಮಿಗಳಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು. ಮಕ್ಕಳು ತಂದೆ ತಾಯಿ ಶಿಕ್ಷರಿಗೆ ಗೌರವ ತರುವ ಕೆಲಸ ಮಾಡುವ ಮೂಲಕ ಶ್ರೇಷ್ಠ ವ್ಯಕ್ತಿಗಳಾಗಬೇಕು ಎಂದು ತಿಳಿಸಿದರು.ಸಂಸದ ಜಗದೀಶ ಶೆಟ್ಟರ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ‌ ಚಟುವಟಿಕೆಗಳ ಜೊತೆಗೆ ದೈಹಿಕ,‌ ಮಾನಸಿಕವಾಗಿ ಉತ್ತೇಜನ ನೀಡುವ ಕಾರ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಶಿಸ್ತು ಬದ್ಧ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಇಂದು ಸೇರಿರುವ ಮಕ್ಕಳನ್ನು‌ ಉತ್ತಮ ದಾರಿಯಲ್ಲಿ ಬಳಸಿಕೊಂಡಲ್ಲಿ‌ ಭವ್ಯ ಭಾರತ ನಿರ್ಮಾಣಕ್ಕೆ ಅನುಕೂಲಕರವಾಗಿದೆ. ಇದೊಂದು ಕೌಶಲ್ಯಗಳನ್ನು, ಮಾನವೀಯ ಮೌಲ್ಯಗಳನ್ನು ತಿಳಿ ಹೇಳುವಂತಹ ಕಾರ್ಖಾನೆಯಂತಿದೆ. ಈ ತರಬೇತಿಯಲ್ಲಿ‌ ಪಾಲ್ಗೊಂಡ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಭವ್ಯ ಭಾರತ‌ ನಿರ್ಮಾಣಕ್ಕೆ‌ ಮುಂದಾಗುವಂತೆ ಕರೆ ನೀಡಿದರು

ಇನ್ನು, ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಯಾವುದೇ ಒಂದು ಧರ್ಮಕ್ಕೆ ಸೀಮತಿವಲ್ಲದ ಆಧ್ಯಾತ್ಮಿಕ ಕೆಲಸವನ್ನು ಸ್ಕೌಟ್ಸ್ ಮತ್ತು ಗೈಡ್ ಮಾಡುತ್ತದೆ. ಎಲ್ಲರ ಸಹಕಾರದಿಂದ 7 ದಿನಗಳ ಕಾಲ ಜಾಂಬೋರೆಟ್ ಕಾರ್ಯಕ್ರಮ ನಡೆಯುತ್ತಿದ್ದು, 200 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ ಕೆಲಸ ಮಾಡುತ್ತಿದೆ. ಸಾಮಾಜಿಕ ಅಭಿವೃದ್ಧಿ, ಶಿಕ್ಷಣ ನಮ್ಮ ಗುರಿಯಾಗಿದೆ. ಇದಕ್ಕೆ ಪೂರಕವಾಗಿ ರಾಷ್ಟ್ರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಭೂತರಾಮನಹಟ್ಟಿಯ ಮುಕ್ತಿಮಠದ ಶಿವಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪೊಲಿಸ್ ಆಯುಕ್ತ ಭೂಷಣ ಭೊರಸೆ, ಜಿಪಂ ಸಿಇಒ ರಾಹುಲ ಶಿಂಧೆ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗನಾಯಕ, ಅಂತಾರಾಷ್ಟ್ರೀಯ ಹೆಚ್ಚುವರಿ ಆಯುಕ್ತ ಎ.ಎಸ್.ಮಧುಸೂದನ್, ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲೀಲಾವತಿ ಹಿರೇಮಠ ಹಾಗೂ ಸ್ಥಾನಿಕ ಆಯುಕ್ತ ರಾಜಶೇಖರ ಚಳಗೇರಿ, ಎ.ಆರ್.ಅಂಬಗಿ, ಎನ್‌.ಆರ್.ಮೆಳವಂಕಿ, ಎಂ.ಎಂ.ಪಾಟೀಲ, ಬೆಳಗಾವಿ ಗ್ರಾಮೀಣ ಬಿಇಒ ಆರ್.ಕೆ.ಆಂಜನೇಯ, ಸ್ಕೌಟ್ಸ್ ಗೈಡ್ಸ್ ರಾಜ್ಯ ಸಹಾಯಕ ಆಯುಕ್ತೆ ಪ್ರಭಾವತಿ ಪಾಟೀಲ, ರಾಜ್ಯ ಕೋಶಾಧಿಕಾರಿ ಟಿ.ಪ್ರಭಾಕರ, ಡಿಒಟಿ ರಾಜಕುಮಾರ ಕುಂಬಾರ, ನಾಗೇಶ ಶಿವಾಪುರ, ವಿಠ್ಠಲ.ಎಸ್, ಹನುಮಂತ ಭಜಂತ್ರಿ, ಶಿವರಾಯ ಏಳುಕೋಟಿ ಹಾಗೂ ಕರ್ನಾಟಕ ರಾಜ್ಯ ಸ್ಕೌಟ್ಸ್ ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ‌ ಆಯುಕ್ತರು, ಉಪಾಧ್ಯಕ್ಷರು ಭಾರತ ಸ್ಕೌಟ್ಸ್ ಮತ್ತು ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಮನ್ನಿಕೇರಿ ಸ್ವಾಗಿತಿಸಿದರು. ರಾಜ್ಯ ಸಂಘಟನಾ ಆಯುಕ್ತೆ ಮಂಜುಳಾ ನಿರೂಪಿಸಿದರು.-------

ಕೋಟ್‌ಸ್ಕೌಟ್ಸ್ ಮತ್ತು ಗೈಡ್ ಇನ್ನೂ ಎತ್ತರಕ್ಕೆ ಬೆಳೆಯುವಂತೆ ಮಾಡುವುದು ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸ್ಕೌಟ್ಸ್ ಮತ್ತು ಗೈಡ್ ಬಹಳ ಮುಖ್ಯ. ಇನ್ನು ಹೆಚ್ಚಿನ ಮಟ್ಟದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಒತ್ತು ಕೊಡಲಾಗುವುದು. ರಾಜ್ಯದ ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ ಪ್ರಾರಂಭಿಸಲು ಚಿಂತನೆ ನಡೆಸಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಮಕ್ಕಳಿಗೆ ಮಾನವೀಯತೆಯ ಮೌಲ್ಯಗಳನ್ನು ನೀಡುತ್ತಿದ್ದು, ಮಕ್ಕಳು ಶ್ರದ್ಧೆಯಿಂದ ಶಿಸ್ತು ಕಲಿಯಬೇಕು.ಮಧು ಬಂಗಾರಪ್ಪ, ಶಿಕ್ಷಣ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯ ಪರಂಪರೆಯ ಶಿಕ್ಷಣ ಪದ್ಧತಿ ಅತ್ಯವಶ್ಯಕ
29, 30ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ