ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನ-೨೦೨೪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಧನೆ ಸಾಧಕನ ಸ್ವತ್ತು. ದೃಢ ಮನಸು ಇರಬೇಕು. ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರ ಜೀವನವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು. ವಿಶೇಷಚೇತನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಡಳಿತವೂ ಸದಾ ವಿಶೇಷ ಚೇತನರ ಕುಂದುಕೊರತೆಗಳಿಗೆ ಸ್ಪಂದಿಸುತ್ತದೆ. ಶಿಸ್ತು ಬದ್ಧ ಜೀವನ ನಡೆಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ವಿಶೇಷ ಚೇತನರಿಗಾಗಿಯೇ ಇರುವ ಸರ್ಕಾರದ ಸೌಲಭ್ಯಗಳನ್ನು, ಮತ್ತು ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಾಧನೆ ಮಾಡಿದ ರಾಜೇಶ ಪವಾರ, ಬಂದೇನವಾಜ ಕಲ್ಲೂರ, ಮೋದಿನ ಪಾಶ, ಅಶೋಕ ವಾಲಿಕಾರ, ಶಶಿಕಲಾ ಸೋನಾರ, ಸುಮೀತ ಪಾಂಡಿಚೇರಿ, ಸಂಜೀವ ಭವನಸಿಂಗ್ ಹಜೇರಿ, ಅಂಬಣ್ಣಾ ಗುನ್ನಾಪುರ, ರಶ್ಮಿ ಚಿತ್ತವಾಡಗಿ, ಮೌಲಾಲಿಕ ಮಂಟೂರ ಅವರನ್ನು ಸನ್ಮಾನಿಸಲಾಯಿತು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಡಿಎಆರ್ ಡಿವೈಎಸ್‌ಪಿ ಡಿ.ವೈ.ಧನಗರ, ವಾರ್ತಾಧಿಕಾರಿ ಅಮರೇಶ ದೊಡಮನಿ, ನಿಮಿಷ ಆಚಾರ್ಯ, ವಿನೋದ ಖೇಡ, ರಶ್ಮಿ ಚಿತ್ತವಾಡಗಿ, ಉಪಾಧ್ಯಾಯ, ಫಾದರ್ ಟಿಯೋಲ್ ಮಚಾದೋ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕೋಟ್ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಮುಂದಿನ ಯಶಸ್ಸಿಗೆ ಸಹಕಾರಿಯಾಗಲಿದೆ. ಜೀವನದಲ್ಲಿ ಸಾಧನೆ ಮಾಡಲು ಮಾನಸಿಕ ದೃಢತೆ ಹೊಂದಬೇಕೆ ಹೊರತು ದೈಹಿಕವಾಗಿ ಅಲ್ಲ. ಮಾನಸಿಕವಾಗಿ ಸದೃಢತೆ ಹೊಂದಿದ್ದರೆ ಸಾಧನೆಯ ಶಿಖರವನ್ನೇ ಏರಬಹುದಾಗಿದೆ.