ಮಾನವೀಯ ಮೌಲ್ಯಗಳೊಂದಿಗೆ ಬಲಿಷ್ಠ ದೇಶ: ಎಸಿ ರಶ್ಮಿ

KannadaprabhaNewsNetwork |  
Published : Aug 18, 2026, 03:00 AM IST
ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್‌.ಆರ್‌.  ಧ್ವಜವಂದನೆ ಸ್ವೀಕರಿಸಿದರು | Kannada Prabha

ಸಾರಾಂಶ

ದೇಶದ ಅಭಿವೃದ್ಧಿಯ ವೇಗ ಹೆಚ್ಚುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾನವೀಯ ಮೌಲ್ಯಗಳು, ಸಂಸ್ಕೃತಿ ಹಾಗೂ ಪರಸ್ಪರ ಗೌರವದಂತಹ ಮೂಲಭೂತ ಗುಣಗಳನ್ನು ಕಳೆದುಕೊಳ್ಳಬಾರದು.

ಕುಂದಾಪುರ: ದೇಶದ ಅಭಿವೃದ್ಧಿಯ ವೇಗ ಹೆಚ್ಚುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾನವೀಯ ಮೌಲ್ಯಗಳು, ಸಂಸ್ಕೃತಿ ಹಾಗೂ ಪರಸ್ಪರ ಗೌರವದಂತಹ ಮೂಲಭೂತ ಗುಣಗಳನ್ನು ಕಳೆದುಕೊಳ್ಳಬಾರದು. ದೇಶ, ತಂದೆ-ತಾಯಿ ಹಾಗೂ ಸಮಾಜದ ಬಗ್ಗೆ ಗೌರವ ಮತ್ತು ಕಾಳಜಿಯ ಭಾವನೆ ಪ್ರತಿಯೊಬ್ಬರಲ್ಲೂ ಬಲಗೊಳ್ಳಬೇಕು ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್‌.ಆರ್‌. ಹೇಳಿದರು.

ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಪ್ರತಿವರ್ಷ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್‌. ಹರಿಪ್ರಸಾದ್‌ ಶೆಟ್ಟಿಕಾನ್ಮಕ್ಕಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಪುರಸಭೆ ಮಾಜಿ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಗುಣರತ್ನಾ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಶೇಖರ ಪೂಜಾರಿ, ಪ್ರಭಾಕರ್ ವಿ., ಮಾಜಿ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ಆನಂದ್‌, ಗ್ರೇಡ್-2 ತಹಸೀಲ್ದಾರ್ ವಸಂತ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ., ಡಿವೈಎಸ್‌ಪಿ ಎಚ್‌.ಡಿ. ಕುಲಕರ್ಣಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸತ್ಯನಾರಾಯಣ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌. ಶೋಭಾ ಶೆಟ್ಟಿ ವಂದಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.ಗಮನ ಸೆಳೆದ ಪಥಸಂಚಲನ: ಧ್ವಜಾರೋಹಣದ ಬಳಿಕ ನಡೆದ ಆಕರ್ಷಕ ಪಥಸಂಚಲನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಬಿ.ನಾಗೇಂದ್ರ ವಜಾಕ್ಕೆ ಆಗ್ರಹ
ರೋಗ ನಿರೋಧಕ ಶಕ್ತಿ ವೃದ್ಧಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್‌ ಬಳಸಿ