ತರೀಕೆರೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ । ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ
ಶಿಕ್ಷಣಕ್ಕೆ ಪರಿವರ್ತನೆ ಶಕ್ತಿ ಇದೆ. ಅದರಂತೆ ಶಿಕ್ಷಕರು ವ್ಯಕ್ತಿಯ ಜೀವನವನ್ನು ಪರಿಪೂರ್ಣವಾಗಿಸುತ್ತಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು ಜಿಲ್ಲೆ, ತಾಲೂಕು ಅಡಳಿತ, ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ,ಅಜ್ಜಂಪುರ ಪಪಂ, ಜಿಲ್ಲಾ-ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಉಪ ನಿರ್ದೇಶಕರ ಕಚೇರಿ (ಅಡಳಿತ) (ಅಭಿವೃದ್ದಿ) ಚಿಕ್ಕಮಗಳೂರು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಯಿಂದ ಪಟ್ಟಣದ ಶ್ರೀ ಗುರು ಸಿದ್ದರಾಮೇಶ್ವರ ಮಾಂಗಲ್ಯ ಮಂದಿರದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ 137ನೇ ಜನ್ಮ ದಿನೋತ್ಸವ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಚ್ಚು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗುರುಗಳನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಅಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕರಾಗಿ ರಾಷ್ಟ್ರಪತಿ ಗಳಾಗಿರುವುದು ಬಹಳ ದೊಡ್ಡ ಸಾಧನೆ. ಶಿಕ್ಷಕರನ್ನು ನಾವು ಸದಾ ನೆನಪಿಸಿಕೊಳ್ಳುತ್ತೇವೆ. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಬಹಳ ಕಷ್ಟ ಪಟ್ಟು ಶಿಕ್ಷಣ ಕಲಿತರು, ಜಾಗೃತರಾಗಬೇಕು, ಶಿಕ್ಷಣಕ್ಕೆ ಹೆಚ್ಚು ಮಹತ್ವವಿದೆ ಎಂದರು.
ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿ ಜ್ಞಾನಕ್ಕಿಂತ ಮಿಗಿಲಾದ ವರವಿಲ್ಲ, ಸುಜ್ಞಾನದ ಕಡೆಗೆ ಶಿಕ್ಷಕರು ಕರೆದೊಯ್ಯುತ್ತಾರೆ, ಗುರುವಿಗೆ ಗೌರವ ಕೊಡಬೇಕು ಎಂದು ಹೇಳಿದರು.
ಬರಿ ಮಾಹಿತಿ ಜ್ಞಾನ ಅಲ್ಲ, ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡು ಮೆದುಳಿಗಿಂತ ಮನಸ್ಸಿಗೆ ಪಾಠ ಮಾಡಬೇಕು ಎಂದ ಹೇಳಿದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ (ವರ್ಮ) ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಸಾ.ಶಿ.ಇ.ಉಪ ನಿರ್ದೇಶಕ ಜಿ.ಕೆ.ಪುಟ್ಚರಾಜು, ಶಿಕ್ಷಕ ಎಂ.ಬಿ.ರಾಮಚಂದ್ರಪ್ಪ ಮತ್ತಿತರರು ಮಾತನಾಡಿದರು.
ಶಕ್ತಿಯುತ ಸಮಾಜ ಬೆಳೆಸಿ: ಡಿಸಿ ಮೀನಾ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲೆ ಕಲೆ ಸಾಹಿತ್ಯ ಇರುವ ಜಿಲ್ಲೆ, ಎಲ್ಲ ಮಕ್ಕಳಿಗೂ ಮಂಡಳಿ ಪರೀಕ್ಷೆಗೆ ಹೇಗೆ ಸಿದ್ದರಾಗಬೇಕು. ಎಲ್ಲರೂ ಕೈಜೋಡಿಸಿ ಜಿಲ್ಲೆಯ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ತನ್ನಿ, ನಾವು ಶಿಕ್ಷಕರನ್ನು ನೆನಪಿಸಿ ಕೊಳ್ಳುತ್ತೇವೆ, ಶಿಕ್ಷಣದಿಂದ ಯಾರೂ ಹೊರಗಡೆ ಇರಬಾರದು. ಒಂದನೇ ಕ್ಲಾಸಿನಿಂದಲೇ ಹೆಚ್ಚು ಒತ್ತು ಕೊಡಬೇಕು, ಬದಲಾವಣೆ ತನ್ನಿ, ಶಕ್ತಿಯುತವಾದ ಸಮಾಜವನ್ನು ಬೆಳೆಸಬೇಕು ಎಂದು ಹೇಳಿದರು.
5ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜನ್ಮ ದಿನೋತ್ಸವ ಅಂಗವಾಗಿ ಜಿಲ್ಲಾ ಮಚ್ಚು ತಾಲೂಕು, ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆಯನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ನೆರವೇರಿಸಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಪುರಸಭೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ (ವರ್ಮ) ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮತ್ತಿತರರು ಇದ್ದರು.