ವಯನಾಡಿಗೆ ಔಷಧಿಗಳೊಂದಿಗೆ ತೆರಳಿದ ತಜ್ಞ ವೈದ್ಯರ ತಂಡ

KannadaprabhaNewsNetwork |  
Published : Aug 01, 2024, 12:28 AM IST
52 | Kannada Prabha

ಸಾರಾಂಶ

ಕೇರಳದ ವಯನಾಡಿನಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆ ಜನರನ್ನು ರಕ್ಷಿಸಲು ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆ ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರ ತಂಡವನ್ನು ಔಷಧಿಗಳೊಂದಿಗೆ ಕಳುಹಿಸಿಕೊಡಲಾಯಿತು.

ಕನ್ನಡಪ್ರಭ ವಾರ್ತೆ ಹ್ಯಾಂಡ್ ಪೋಸ್ಟ್

ಕೇರಳದ ವಯನಾಡಿನಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆ ಜನರನ್ನು ರಕ್ಷಿಸಲು ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆ ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರ ತಂಡವನ್ನು ಔಷಧಿಗಳೊಂದಿಗೆ ಕಳುಹಿಸಿಕೊಡಲಾಯಿತು.

ಈ ತಂಡವನ್ನು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ತಜ್ಞ ವೈದ್ಯರಾದ ಡಾ. ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ. ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವಯನಾಡಿಗೆ ಕಳುಹಿಸಿಕೊಟ್ಟರು.

ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು ಮಾತನಾಡಿ, ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವಯನಾಡಿಗೆ ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ ನುರಿತ ತಜ್ಞ ವೈದ್ಯರನ್ನು ಕೇರಳದ ವಯನಾಡಿಗೆ ಜಿಲ್ಲಾಡಳಿತ ವತಿಯಿಂದ ಕಳಿಸುತ್ತಿದ್ದೇವೆ, ಜೊತೆಗೆ ನಮ್ಮ ತಾಲೂಕಿನ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು, ನಿಯೋಜನೆ ಮಾಡಿಕೊಂಡಿದ್ದೇವೆ, ಜೊತೆಗೆ ಎಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿ ಕೊಂಡಿದ್ದೇವೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.

ಡಾ.ವರ್ಷ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಂದ್ರ, ರವಿರಾಜ್, ಆರ್ಐ ಗೌಸ್, ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?