ಮಂಚನಬೆಲೆ ಬಳಿ ತಾತ್ಕಾಲಿಕ ಸೇತುವೆ

KannadaprabhaNewsNetwork |  
Published : Nov 04, 2024, 12:16 AM IST
3ಮಾಗಡಿ2 : ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯದ ಸಮೀಪ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿರುವುದು. | Kannada Prabha

ಸಾರಾಂಶ

ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಕಾವೇರಿ ನೀರಾವರಿ ನಿಗಮದಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ.

ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಕಾವೇರಿ ನೀರಾವರಿ ನಿಗಮದಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ.

ಇತ್ತೀಚೆಗಷ್ಟೇ ಸುರಿದ ಭಾರಿ ಮಳೆಯಿಂದ ಮಂಚನಬೆಲೆ ಜಲಾಶಯದಿಂದ 2 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಇದರಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು.

ಜಲಾಶಯದಿಂದ ನೀರಿನ ಹರಿವು ಕಡಿಮೆ ಇರುವುದರಿಂದ ಕಾವೇರಿ ನೀರಾವರಿ ನಿಗಮದ ವತಿಯಿಂದ ಹಳೆ ಸೇತುವೆ ಇದ್ದ ಜಾಗದಲ್ಲೇ ಈಗ ಮತ್ತೊಂದು ಮಣ್ಣಿನ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರಿಂದ ಮಂಚನಬೆಲೆ ಗ್ರಾಮದಿಂದ ವಿವಿಧ ಗ್ರಾಮಗಳಿಗೆ ತೆರಳುವ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗಿದೆ.

ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ರಜಾ ದಿನಗಳಲ್ಲಿ ಮಂಚನಬೆಲೆ ಜಲಾಶಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಕಾವೇರಿ ನೀರಾವರಿ ನಿಗಮ ಇಲಾಖೆ ಕೂಡಲೇ ಹೊಸ ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಈಗಾಗಲೇ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ.

ಶೀಘ್ರದಲ್ಲೇ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಿ ಎಷ್ಟೇ ಮಳೆ ಬಂದರೂ ಯಾವುದೇ ರೀತಿ ಸೇತುವೆಗೆ ಹಾನಿಯಾಗದಂತೆ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲತೆ ಮಾಡಿಕೊಡಬೇಕು ಎಂಬುದು ಮಂಚನಬೆಲೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಜಾಲತಾಣದಲ್ಲಿ ಫೋಟೋ ಹಂಚಿಕೊಂಡ ಎಂಪಿ:

ಅಧಿಕಾರಿಗಳ ಸಹಕಾರದೊಂದಿಗೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದ್ದು, ಸರ್ಕಾರಿ ಬಸ್ ಸೇವೆ ಕಲ್ಪಿಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸಹಕರಿಸಿದ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಸಂಸದ ಡಾ.ಮಂಜುನಾಥ್ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

3ಮಾಗಡಿ2 :

ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಸಮೀಪ ತಾತ್ಕಾಲಿಕ ಸೇತುವೆ ನಿರ್ಮಿಸಿರುವುದು.

PREV

Recommended Stories

ವಿಕ್ಟೋರಿಯಾ ಆಸ್ಪತ್ರೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ
ಇಂದು ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ : ಇಲ್ಲೆಲ್ಲಾ ವಾಹನಗಳಿಗೆ ನಿಷೇಧ