ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಗುರುವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಳೆಯಂಗಡಿಯ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಮೃತ ಯುವಕ ಗಣೇಶ್ ದೇವಾಡಿಗ ಪಣಂಬೂರು ಬಂದರಿನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆ ಸುಮಾರಿಗೆ ಕೆಲಸಕ್ಕೆಂದು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮುಕ್ಕ ಜಂಕ್ಷನ್‌ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಗೊಳಿಸಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯಲ್ಲಿ ನಡೆದಿದೆ.ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ.