ಇದೊಂದು ಹಬ್ಬವೆಂದರೆ ತಪ್ಪಾಗಲಾರದು. ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯಿಂದ ವಿವೇಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿ ಪದಕ ನೀಡಿ ಪ್ರೋತ್ಸಾಹಿಸಲಾಗುವುದು.
ತಿಪಟೂರು: ನಗರದ ಶ್ರೀ ವಿವೇಕಾನಂದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 16ನೇ ವರ್ಷದ ಫೆಸ್ಟ್ 2024- 25 ಸಮಾರಂಭವನ್ನು ಜ. 3, 4 ಮತ್ತು 5ರಂದು ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ. ಕೇಶವಕುಮಾರ್ ತಿಳಿಸಿದರು.ನಗರದ ಶ್ರೀ ವಿವೇಕಾನಂದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೧೬ ವರ್ಷಗಳಿಂದ ನಮ್ಮ ಶಾಲೆಯಲ್ಲಿ ಈ ಸಮಾರಂಭವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವಿದ್ಯಾರ್ಥಿಯೂ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಸತತ ಮೂರು ದಿನಗಳ ಕಾಲ ಈ ಸಮಾರಂಭ ನಡೆಯಲಿದೆ. ಪ್ರತಿನಿತ್ಯ ಪೋಷಕರು ಮತ್ತು ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಪೋಷಕರಿಂದ ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ ಸಂಸ್ಥೆಯ ಹಣದಿಂದ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದೊಂದು ಹಬ್ಬವೆಂದರೆ ತಪ್ಪಾಗಲಾರದು. ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯಿಂದ ವಿವೇಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿ ಪದಕ ನೀಡಿ ಪ್ರೋತ್ಸಾಹಿಸಲಾಗುವುದು. ನಮ್ಮ ಶಾಲೆಯಲ್ಲಿ 1200 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು ಅಷ್ಟೂ ಮಕ್ಕಳೂ ಒಂದೊಂದು ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹೀಗೆ ಮೂರು ವಿಭಾಗಗಳನ್ನಾಗಿ ಮಾಡಲಾಗುವುದು. ಈಗಾಗಲೇ ವೇದಿಕೆಯ ಸಿದ್ಧತೆ ನಡೆಯುತ್ತಿದ್ದು ಸಮಿತಿಗಳನ್ನು ರಚಿಸಿ ಜವಾಬ್ದಾರಿ ನೀಡಿ ಯಶಸ್ವಿಯಾಗಿ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೂರು ದಿನಗಳು ನಡೆಯುವ ಸಮಾರಂಭಕ್ಕೆ ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಸೀಲ್ದಾರ್ ಪವನ್‌ಕುಮಾರ್, ಬಿಇಒ ಚಂದ್ರಯ್ಯ, ನಗರಸಭೆ ಅಧ್ಯಕ್ಷೆ ಯಮುನಾ, ಸದಸ್ಯರಾದ ಯೋಗೀಶ್ ಸೇರಿದಂತೆ ವಿವಿಧ ಗಣ್ಯರು, ಸಮಾಜ ಸೇವಕರು, ವಿವಿಧ ಶಾಲೆಗಳ ಮುಖ್ಯಸ್ಥರು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.