ಕನ್ನಡಪ್ರಭವಾರ್ತೆ ಸಾಗರ
ಇಲ್ಲಿನ ಆರ್ಯ ಈಡಿಗರ ಸಮುದಾಯ ಭವನದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಮಾತನಾಡಿ, ಪಕ್ಷದ ಜೊತೆ ಸದಾ ಇರುವ, ಕಾರ್ಯಕರ್ತರು ಆಯ್ಕೆ ಮಾಡುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಹೈಕಮಾಂಡ್ ಟಿಕೆಟ್ ನೀಡಿದ ಅಭ್ಯರ್ಥಿ ಪರವಾಗಿ ನಾವೆಲ್ಲಾ ಕೆಲಸ ಮಾಡಿದ್ದೇವೆ. ಆದರೂ ಸೋಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಹಾಲಪ್ಪನವರ ರೀತಿ ಅಮಾಯಕರ ಮೇಲೆ ಹಲ್ಲೆ ಮಾಡಿಸುವಷ್ಟು ಕಾನೂನು ಹದಗೆಟ್ಟಿಲ್ಲ ಎಂದು ಟಾಂಗ್ ನೀಡಿದರು.ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಅವಶ್ಯ:
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಐ.ಎನ್.ಸುರೇಶಬಾಬು, ಅಶೋಕ್ ಬೇಳೂರು, ರವಿಕುಮಾರ್ ಎಚ್.ಎಂ., ಕೆ.ಹೊಳೆಯಪ್ಪ, ಬಿ.ಎ.ಇಂದೂಧರ ಗೌಡ, ಪ್ರಭಾವತಿ ಚಂದ್ರಕಾಂತ್, ಮಕ್ಬೂಲ್ ಅಹ್ಮದ್, ಚಂದ್ರಮೌಳಿ, ಉಷಾ ಎನ್. ಇನ್ನಿತರರು ಹಾಜರಿದ್ದರು. ಚೇತನರಾಜ್ ಕಣ್ಣೂರು ಸ್ವಾಗತಿಸಿದರು. ಮೈಕಲ್ ಡಿಸೋಜಾ ನಿರೂಪಿಸಿದರು.
ಕೇಂದ್ರದ ಸರ್ಕಾರವೇ ಸ್ಥಿರವಿಲ್ಲ
ಗೋಪಾಲಕೃಷ್ಣ ಬೇಳೂರು, ಶಾಸಕ
ಕೆಲವು ಕಾರ್ಯಕರ್ತರು ಸೋಲಿನ ನೈತಿಕ ಹೊಣೆಹೊತ್ತು ಸಚಿವ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರೆ, ಇನ್ನು ಕೆಲವರು ಬಂಗಾರಪ್ಪ ಅವರ ಕುಟುಂಬದ ವೈಯಕ್ತಿಕ ಜಗಳ ಚುನಾವಣೆ ಮೇಲೆ ಪ್ರಭಾವ ಬೀರಿದೆ ಎಂದು ಅಭಿಪ್ರಾಯಪಟ್ಟರು. ಇನ್ನಷ್ಟು ಕಾರ್ಯಕರ್ತರು ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಲು ಮನವಿ ಮಾಡಿದರು.